- Saturday
- April 19th, 2025

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ 22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದ್ದು, ಬೆಳಿಗ್ಗೆ ಹಸಿರುವಾಣಿ ಸಮರ್ಪಣೆ ನಡೆಯಿತು. ಮದ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು.

ಸುಳ್ಯ: ಅಜ್ಜಾವರ ಶಾಖೆ SKSSF ವತಿಯಿಂದ ಸ್ಥಾಪಕ ದಿನಾಚರಣೆಯ ಪ್ರಯುಕ್ತ ಅಜ್ಜಾವರ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಜಮಾಅತ್ ಕಮಿಟಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಧ್ವಜಾರೋಹಣ ನೆರವೇರಿಸಿದರು. ಪೇರಡ್ಕ ಜುಮಾ ಮಸೀದಿ ಖತೀಬರಾದ ರಿಯಾಝ್ ಫೈಝಿ ಎಮ್ಮೆಮ್ಮಾಡು ಮಖಾಂ ಝಿಯಾರತ್ ಗೆ ನೇತೃತ್ವವನ್ನು ವಹಿಸಿ ಸಂದೇಶ ಭಾಷಣವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜಲೀಲ್ ದಾರಿಮಿ ಮಾಡನ್ನೂರ್...

ಹುಣಸೂರಿನಿಂದ ಸುಳ್ಯ ಕಡೆಗೆ ತರಕಾರಿ ಸಾಗಿಸಿ ಬರುತ್ತಿದ್ದ ಪಿಕಪ್ ವಾಹನ ಪಲ್ಟಿಯಾದ ಘಟನೆ ಫೆ.20ರಂದು ಕೊಡಗು ಸಂಪಾಜೆಯ ಕೊಯನಾಡಿನ ದೇವರಕೊಲ್ಲಿಯಲ್ಲಿ ನಡೆದಿದೆ. ತರಕಾರಿ ಸಾಗಿಸಿ ಬರುತ್ತಿದ್ದ ಪಿಕಪ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ವ್ಯಕ್ತಿಯೋರ್ವನ ಕೈಯಲ್ಲಿ ಪಟಾಕಿ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡ ಘಟನೆ ಫೆ.20ರಂದು ಬೆಳಿಗ್ಗೆ ಕನಕಮಜಲಿನಲ್ಲಿ ಸಂಭವಿಸಿದೆ.ಕೈಯ ಬೆರಳುಗಳಿಗೆ ಗಂಭೀರವಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದ ಏಕಹಾ ಭಜನೆಯು ಜರುಗುತ್ತಿದ್ದು, ಕನಕಮಜಲು ಗ್ರಾಮದ ಗಬ್ಬಲಡ್ಕ ಪುರುಷೋತ್ತಮ ನಾಯ್ಕರ ಮಗ ಚಂದ್ರಶೇಖರ ಗಬ್ಬಲಡ್ಕ ಎಂಬವರು ಪಟಾಕಿಯೊಂದನ್ನು ಸಿಡಿಸುವ ವೇಳೆ ಕೈಯಲ್ಲೇ ಸ್ಪೋಟಗೊಂಡು,...

ಕೊಲ್ಲಮೊಗ್ರದಲ್ಲಿ ಫೆಬ್ರವರಿ 21 ರಿಂದ ಏಳು ದಿನಗಳ ಸುಜೋಕ್ ಮತ್ತು ಅಕ್ಯುಪ್ರೆಶರ್ ಚಿಕಿತ್ಸೆ ಆಯೋಜನೆಗೊಂಡಿದೆ.ಶ್ರೀ ಮಯೂರ ಕಲಾ ಮಂದಿರದಲ್ಲಿ ಫೆಬ್ರವರಿ 21ರಿಂದ 27 ರ ವರೆಗೆ ಏಳು ದಿನಗಳ ಸುಜೋಕ್ ಮತ್ತು ಅಕ್ಯುಪ್ರೆಶರ್ ಚಿಕಿತ್ಸೆ ನಡೆಯಲಿದೆ.ಶಿವಮೊಗ್ಗದ ಶ್ರೀ ಚಂದನ್. ಜಿ. ಮತ್ತು ಶ್ರೀ. ಮಂಜುನಾಥ್. ಎನ್.ರವರು ಚಿಕಿತ್ಸೆ ನೀಡಲಿದ್ದಾರೆ.ಮೊಣಕಾಲು ನೋವು, ಸೊಂಟ ನೋವು, ಬೆನ್ನು ನೋವು,...

ಫೆ.26ರಿಂದ 28ರವರೆಗೆ ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದ ಕಾಲಾವಧಿ ಜಾತ್ರಾಮಹೋತ್ಸವವು ನಡೆಯಲಿದ್ದು, ಇದರ ಅಂಗವಾಗಿ, ಫೆ.19ರಂದು ಮಹೂರ್ತದ ಗೊನೆ ಕಡಿಯಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಬ್ರಹ್ಮಶ್ರೀ ವೇ. ಮೂ. ಪುರೋಹಿತ ನಾಗರಾಜ ಭಟ್, ಆಡಳಿತ ಸಮಿತಿ ಅಧ್ಯಕ್ಷ ಶಿವರಾಮ ರೈ ಕುರಿಯ, ಕೋಶಾಧಿಕಾರಿ ಜಯಂತ...

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ 22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದ್ದು, ಫೆ.20 ರಂದು ಬೆಳಿಗ್ಗೆ 9:00 ಗಂಟೆಯಿಂದ ಹಸಿರು ಕಾಣಿಕೆ ಪ್ರಾರಂಭ, ಮಧ್ಯಾನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 12:30 ರಿಂದ ಅನ್ನಸಂತರ್ಪಣೆ, ಸಾಯಂಕಾಲ ತಂತ್ರಿಗಳ ಆಗಮನ, ರಾತ್ರಿ 8:00 ಗಂಟೆಗೆ...

ಸರಕಾರಿ ಪ್ರಥಮ ರ‍್ಜೆ ಕಾಲೇಜು ಸುಳ್ಯ ಇಲ್ಲಿಯ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಫೆ-೧೮ ರಂದು ಆರ೦ಭಗೊಂಡಿತು, ಕಾರ್ಯಕ್ರಮದ ಉದ್ಘಾಟನೆಯನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಭಾರತಿ ಸಾಲ್ತಾಡಿ ನೆರವೇರಿಸದರು, ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ಇವರು...

ಸಂಪಾಜೆ ಗ್ರಾಮ ಪಂಚಾಯತ್ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಕೆ. ಹನೀಫ್ ಸರ್ವರನ್ನು ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ ಪ್ರಸ್ತಾವಿಕವಾಗಿ ಮಾತನಾಡಿ ಗ್ರಾಮ ಪಂಚಾಯತ್ ತೆರಿಗೆ ಕುಡಿಯುವ ನೀರು, ಲೈಸೆನ್ಸ್ ಸಮಯಕ್ಕೆ ಸರಿಯಾಗಿ ಪಾವತಿಮಾಡಿ ಸಹಕರಿಸುವಂತೆ ಹಾಗೂ ಗ್ರಾಮದ ಅಭಿವೃದಿಯಲ್ಲಿ...

ಸುಳ್ಯ ಕಟ್ಟೆಯ ಬಳಿಯಲ್ಲಿ ಇದೀಗ ರಸ್ತೆ ಅಪಘಾತ ಸಂಭವಿಸಿದ್ದು ಸುಳ್ಯದ ಪಿಗ್ಮಿ ಸಂಗ್ರಾಹಕ ಮತ್ತು ಡಿಜೆ ಫ್ರೆಂಡ್ಸ್ ಇದರ ಸದಸ್ಯ ದೀಕ್ಷಿತ್ ಎಂಬುವವರಿಗೆ ಗಂಭೀರ ತರನದ ಗಾಯಗಳಾಗಿವೆ ಎಂದು ಸ್ಥಳೀಯರ ಮಾಹಿತಿ ಪ್ರಕಾರ ಹೇಳಲಾಗುತ್ತಿದ್ದು ಸದ್ಯ ಅವರನ್ನು ಕೆವಿಜಿ ಆಸ್ಪತ್ರೆಗೆ ಕೊಂಡೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯೊಲಾಗಿದೆ ಎಂದು ತಿಳಿದು ಬಂದಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

All posts loaded
No more posts