ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಮಂಡಳಿಗೆ ನಿರ್ದೇಶಕ ಸ್ಥಾನಕ್ಕೆ ಬಿಜೆಪಿಯಿಂದ ಎಸ್.ಎನ್.ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಕಾಂಗ್ರೆಸ್ ಬೆಂಬಲಿತರಾಗಿ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಎಸ್.ಎನ್.ಮನ್ಮಥ ರವರು ಅವಿರೋಧವಾಗಿ ಆಯ್ಕೆಯಾದಂತಾಗಿದೆ. ಅಧಿಕೃತ ಘೋಷಣೆ ಬಾಕಿಯುಳಿದಿದೆ.
ಎಸ್ ಎನ್. ಮನ್ಮಥರವರು ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ. ಜಿ.ಪಂ. ಮಾಜಿ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.