Ad Widget

ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ಸುಳ್ಯ ಶಾಸಕರಿಂದ ಖಂಡನೆ

ಕಡಬ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಇದೊಂದು ಅಮಾನವೀಯ ಕೃತ್ಯ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗೆ ತಕ್ಕ ಶಿಕ್ಷೆ ವಿಧಿಸುವಂತೆ ಸರಕಾರ ಮತ್ತು ಪೊಲೀಸ್ ಇಲಾಖೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಆಗ್ರಹಿಸಿದ್ದಾರೆ. ಆ್ಯಸಿಡ್ ದಾಳಿ ಒಳಗಾದ ವಿದ್ಯಾರ್ಥಿನಿಯರಿಗೆ ಸರಕಾರದಿಂದ ಸಂಪೂರ್ಣ ಚಿಕಿತ್ಸಾ ವೆಚ್ಚ ಹಾಗೂ ಗರಿಷ್ಠ ಮೊತ್ತದ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದರು.

. . . . . . . . .



ಸಿದ್ದರಾಮಯ್ಯ ಹಾಗೂ ಡಿಕೆಶಿ  ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಮಹಿಳೆಯರಿಗೆ ಮತ್ತು ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರು ಮಂಗಳೂರಿನ ಎಜೆ ಆಸ್ಪತ್ರೆಗೆ ಭೇಟಿ ನೀಡಿ ದಾಖಲಾಗಿರುವ ಸಂತ್ರಸ್ತ  ವಿದ್ಯಾರ್ಥಿನಿಯರ ಆರೋಗ್ಯವನ್ನು ವಿಚಾರಿಸಿದರು ಹಾಗೂ ಪೋಷಕರಿಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಜೊತೆಗಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಸಮಾಲೋಚಿಸಿ ತನಿಖೆಯನ್ನು  ತೀವ್ರಗೊಳಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಿ ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆ ನಡೆಯದಂತೆ ಸೂಕ್ತ ಎಚ್ಚರಿಕೆ ಕ್ರಮವನ್ನು ವಹಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ನಂದನ್ ಮಲ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರಾಕೇಶ್ ಕೆಡೆಂಜಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading