
ಸುಳ್ಯ ತಾಲೂಕಿನಲ್ಲಿ ಮಾ. 10 ರಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವು ನಡೆಯಲಿದೆ.
ಕರ್ನಾಟಕ ರಾಜ್ಯ ಸರಕಾರವು ನೀಡುತ್ತಿರುವ ಅನ್ನಭಾಗ್ಯ, ಸ್ತ್ರೀಶಕ್ತಿ, ಗೃಹಲಕ್ಷ್ಮಿ, ಯುವನಿಧಿ, ಗೃಹ ಜ್ಯೋತಿ ಯೋಜನೆಗಳ ಫಲಾನುಭವಿಗಳ ಸಭೆಯನ್ನು ಸರಕಾರದ ವತಿಯಿಂದ ನಡೆಸಲಾಗುವುದು. ಈ ಸಮಾವೇಶವು ಸುಳ್ಯದ ಪರಿವಾರಕಾನದಲ್ಲಿರುವ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಂಗಣದಲ್ಲಿ ನಡೆಯಲಿದೆ. ಸುಮಾರು 2500 ರಿಂದ 3000 ಮಂದಿ ಭಾಗವಹಿಸಲಿದ್ದಾರೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರುಗಳು, ಸಂಸದರು ಭಾಗವಹಿಸಲಿದ್ದಾರೆಂದು ತಹಶೀಲ್ದಾರ್ ಜಿ.ಮಂಜುನಾಥ್ ತಿಳಿಸಿದ್ದಾರೆ.