
ಸುಬ್ರಹ್ಮಣ್ಯ ಮಾ.7: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಿಜಯ ಗ್ರಾಮೀಣ ಪ್ರತಿಷ್ಠಾನ ಸಂಸ್ಥೆಮಂಗಳೂರು ಇವರು ಎರಡು ಕಂಪ್ಯೂಟರ್ ಪ್ರಿಂಟರ್ಗಳನ್ನು ಇಂದು ಗುರುವಾರ ಕೊಡುಗೆಯಾಗಿ ನೀಡಿರುತ್ತಾರೆ.
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ಮಂಗಳೂರಿನ ವಿಜಯ ಗ್ರಾಮೀಣ ಪ್ರತಿಷ್ಠಾನ ಸಂಸ್ಥೆಯ ಕಾರ್ಯದರ್ಶಿ ರಾಜೇಂದ್ರ ರೈ ಬೆಳ್ಳಿಪಾಡಿ ಇವರು ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾl ತ್ರಿಮೂರ್ತಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ, ವಿಜಯ ಪ್ರತಿಷ್ಠಾನ ಸಂಸ್ಥೆಯ ಪಂಡರಿನಾಥ, ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರುಷನ ಅಧಿಕಾರಿ ಶ್ರೀಮತಿ ಸುಮಾ, ಪ್ರಾಥಮಿಕ ಸುರಕ್ಷಾ ಅಧಿಕಾರಿ ಶ್ರೀಮತಿ ಹೇಮಲತಾ ,ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಭಾಗ್ಯಶ್ರೀ, ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಜರಿದ್ದರು.