Ad Widget

ಇಂದು ಸುಳ್ಯದಲ್ಲಿ ಗ್ಯಾರಂಟಿ ಸಮಾವೇಶ: ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಪಕ್ಷದ ನಾಯಕರು ಭಾಗಿ.

ರಾಜ್ಯ ಕಾಂಗ್ರೆಸ್ ಸರಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಮಟ್ಟದ ಗ್ಯಾರಂಟಿ ಸಮಾವೇಶ ಇಂದು ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು. ಶಾಸಕರುಗಳು, ವಿಧಾನಪರಿಷತ್ ಸದಸ್ಯರು, ನಗರ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಸೇರಿ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

. . . . . . . . .

ಪ್ರತಿ ಗ್ರಾಮಗಳಿಂದ ಬಸ್ ವ್ಯವಸ್ಥೆ .
ಗ್ರಾಮಗಳಿಂದ ಫಲಾನುಭವಿಗಳನ್ನು ಕರೆ ತರಲು ಬಸ್ ವ್ಯವಸ್ಥೆ ಮಾಡಲಾಗಿದ್ದು. 25 ಗ್ರಾಮ ಪಂಚಾಯತ್‌ಗಳಿಂದ ಬಸ್ ವ್ಯವಸ್ಥೆಯ ಜೊತೆಗೆ ನಗರ ವ್ಯಾಪ್ತಿಯಲ್ಲಿ 3 ವ್ಯಾನ್, 3 ಜೀಪ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

. . . . . . .

.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading