- Thursday
- November 21st, 2024
ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ ಸ್ಪರ್ಧೆಯ ಟಿಕೆಟ್ ನೀಡಿದೆ. ಮಂಗಳೂರಿನ ರಥಬೀದಿಯಲ್ಲಿ...
ಅಜ್ಜಾವರ ಸ್ಮಶಾನ ಜಾಗ ಉಳಿಸಲು ಗ್ರಾಮ ಸಭೆಯಲ್ಲೇ ಪ್ರತಿಭಟನೆ , ಮೊದಲ ಭಾರಿಗೆ ಲಿಖಿತ ಹೇಳಿಕೆ ಪಡೆದುಕೊಂಡ ಗ್ರಾಮಸ್ಥರು. ಕುಡಿಯುವ ನೀರು ಹಾಗೂ ಇತರೆ ವಿಚಾರಗಳ ಬಗ್ಗೆ ಪ್ರಶ್ನೆ ಅಸಮರ್ಪಕ ಉತ್ತರ , ಅಧಿಕಾರಿಗಳ ಗೈರಿಗೆ ನೋಟಿಸ್ ನೀಡಲು ತೀರ್ಮಾನ. ಅಜ್ಜಾವರ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಬೇಬಿ ಕಲ್ತಡ್ಕರ ಅಧ್ಯಕ್ಷತೆಯಲ್ಲಿ, ಮೇನಾಲ ಅಂಬೇಡ್ಕರ್ ಭವನದಲ್ಲಿ...
ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಈ ಬಾರಿ ಟಿಕೆಟ್ ಕೈ ತಪ್ಪಿದ್ದು, ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಬಿಜೆಪಿ ಯುವ ನಾಯಕ ಕ್ಯಾಪ್ಟನ್ ಬ್ರಿಜೇಶ್ ಚೌಟಗೆ ಮಣೆ...
ಶ್ರೀ ಪಯಸ್ವಿನಿ ಸಾವಯುವ ಕೃಷಿ ಪರಿವಾರ(ರಿ.) ಸುಳ್ಯ ಮತ್ತು ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸುಬ್ರಹ್ಮಣ್ಯ ಇದರ ಸಹಯೋಗದಲ್ಲಿ ಮಾ.11 ರಂದು ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಡಿಕೆ ಕೃಷಿಕರಿಗೆ ಉಚಿತ ಹೋಮಿಯೋಪತಿ ಔಷಧ ವಿತರಣಾ ಕಾರ್ಯಕ್ರಮ ನಡೆಯಿತು.ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಶ್ರೀ...
ಸುಳ್ಯ ಜಟ್ಟಿಪಳ್ಳ ನಿವಾಸಿ ಸುಳ್ಯದಲ್ಲಿ ಹಲವಾರು ವರ್ಷಗಳಿಂದ ಕವಿತಾ ವೈನ್ಸ್ ನಡೆಸುತ್ತಿದ್ದ ಉದ್ಯಮಿ ಓ ಎಂ ಸುರೇಂದ್ರನ್ ಅಲ್ಪಕಾಲದ ಅಸೌಖ್ಯದಿಂದ ಮಾ.13 ರಂದು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರುಅವರಿಗೆ 57 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ರೇಖಾ ಪುತ್ರ ರೋಹನ್ ಹಾಗೂ ಪುತ್ರಿ ಶಲಬ ರವರನ್ನು ಅಗಲಿದ್ದಾರೆ
ಶತಮಾನ ಕಂಡ ಸುಳ್ಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಾದರಿ ಶಾಲೆಯನ್ನಾಗಿಸಲು ಹಿರಿಯ ವಿದ್ಯಾರ್ಥಿಗಳು ಸಮಿತಿ ರಚಿಸಿ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಎಂ.ಬಿ. ಸದಾಶಿವ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸುಳ್ಯದ ಜ್ಯೋತಿ ಸರ್ಕಲ್ ಬಳಿಯ ಸ.ಮಾ.ಹಿ.ಪ್ರಾ.ಶಾಲೆಯನ್ನು ಆಧುನಿಕ ಅಗತ್ಯಗಳಿಗೆ ಅನುಗುಣವಾಗಿ ಶಾಲೆಯನ್ನು ಪುನರ್ ನಿರ್ಮಾಣಗೊಳಿಸುವ ಅಭಿವೃದ್ಧಿ ಯೋಜನೆಯ ನೀಲಿ ನಕಾಶೆಯನ್ನು ಸಿದ್ಧಪಡಿಸಲಾಗಿದೆ. ಸುರಕ್ಷಿತ ಮತ್ತು ಸುಂದರ...
ಆಲೆಟ್ಟಿ ಗ್ರಾಮ ಪಂಚಾಯತಿನ ಶೇಕಡಾ 25% ರ ಅನುದಾನವು ಪರಿಸಿಷ್ಟ ಜಾತಿ ಮತ್ತು ಪರಿಸಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನದಡಿಯಲ್ಲಿ ಆಲೆಟ್ಟಿ ಗ್ರಾಮ ಪಂಚಾಯತಿನ 2 ನೇ ವಾರ್ಡಿನ ಪಂಚಾಯತ್ ಸದಸ್ಯರ ಶಿಫಾರಸ್ಸಿನ ಮೇರೆಗೆ 2ನೇ ವಾರ್ಡಿನ ಕುಡೆ೦ಬಿ ಪರಿಶಿಷ್ಟ ಪಂಗಡದ ನೀಲಮ್ಮ, ವಸಂತಿ, ಸುಮತಿ, ನೀಲಮ್ಮ, ಪದ್ಮಾವತಿ, ರಾಮಕೃಷ್ಣ, ಪುಷ್ಪಲತಾ ಎಂಬ 7 ಫಲಾನುಭವಿಗಳಿಗೆ...
ಚಂದನ ಸಾಹಿತ್ಯ ವೇದಿಕೆಯಿಂದ ಬೆಳ್ಳಾರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ ಮತ್ತು ಮಹಿಳಾ ಕವಿಗೋಷ್ಠಿ
ಬೆಳ್ಳಾರೆ ಪೆರುವಾಜೆಯ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಮತ್ತು ಮಹಿಳಾ ಕವಿಗೋಷ್ಠಿ ಕಾರ್ಯಕ್ರಮವು ಜರುಗಿತು. ಡಾ.ಕೆ.ಶಿವರಾಮ ಕಾರಂತ ಸರಕಾರಿ ಫುಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇದರ...
ಸ. ಹಿ.ಪ್ರಾ. ಶಾಲೆ ದೇವಚಳ್ಳ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮದಲ್ಲಿ ನೂತನ ಕೊಠಡಿಯ ಗುದ್ದಲಿ ಪೂಜೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ಮಾ.10ರಂದು ನೆರವೇರಿಸಿದರು.ಶತಮಾನೋತ್ಸವದ ಪ್ರಯುಕ್ತ ತರಗತಿ ಕೊಠಡಿಗಳಿಗೆ ಶಿಲಾನ್ಯಾಸ ಮತ್ತು ಹಿರಿಯ ವಿದ್ಯಾರ್ಥಿಗಳ ಮತ್ತು ಪೋಷಕರ ಸಮ್ಮಿಲನ ಹಾಗೂ ಕ್ರೀಡಾಕೂಟವು ನಡೆಯಿತು.ಶತಮಾನೋತ್ಸವ ಸಮಿತಿ ಅಧ್ಯಕ್ಷ ಎ.ವಿ ತೀರ್ಥರಾಮ ಸಭಾ ಸಮಾರಂಭದ ಅಧ್ಯಕ್ಷತೆಯನ್ನು...
ಪುತ್ತೂರು : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವದಕೋಲವು ಮಾ.9ರಂದು ವೈಭವದಿಂದ ನಡೆಯಿತು.ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ್ ಹೆಬ್ಬಾರ್ ಅವರ ನೇತೃತ್ವದಲ್ಲಿ ಬೆಳಿಗ್ಗೆ 8ಕ್ಕೆ ದೇವತಾ ಪ್ರಾರ್ಥನೆ ,ಸ್ಥಳ ಶುದ್ದಿ ,ಶ್ರೀ ಮಹಾಗಣಪತಿ ಹೋಮ ನಡೆಯಿತು.ಸಂಜೆ ದೈವಕ್ಕೆ ಎಣ್ಣೆ ವೀಳ್ಯ...
Loading posts...
All posts loaded
No more posts