ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಮಾ.14 ರಿಂದ 20 ರವರೆಗೆ ನಡೆಯಲಿರುವ ಉಚಿತ ಯೋಗ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಮಾ.14 ರಂದು ನಡೆಯಿತು.
ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ಯೋಗ ತರಬೇತಿ ಶಿಬಿರವನ್ನು ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಲ| ಪ್ರೋ ರಂಗಯ್ಯ ಶೆಟ್ಟಿಗಾರ್ ಸ್ವಾಗತಿಸಿ ಲ| ಸತೀಶ್ ಕೂಜುಗೋಡು ವಂದಿಸಿದರು. ಯೋಗ ಶಿಕ್ಷಕರಾದ ಕೃಷ್ಣಪ್ರಸನ್ನ ಕಟ್ಟ ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)