ಸುಳ್ಯ ನಗರ ಪಂಚಾಯತ್ ಗೆ ಸರಕಾರವು ನಾಮನಿರ್ದೇಶನ ಮಾಡಲು ಮೂವರು ಸದಸ್ಯರನ್ನು ಆಯ್ಕೆ ಮಾಡಲಾಗಿದೆ.
ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಇದೀಗ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಿದ್ದಿಕ್ ಕೊಕ್ಕೊ, ಶಾರದಾಂಬ ಟ್ರಸ್ಟ್ ನ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜು ಪಂಡಿತ್, ಮತ್ತು ದುಗಲಡ್ಕದ ಬಾಸ್ಕರ ಪೂಜಾರಿ ಇವರನ್ನು ಸರಕಾರ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಸುಳ್ಯ ನಗರ ಪಂಚಾಯತ್ ಸದಸ್ಯರಾಗಿ ಈ ಮೂವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ್, ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಎಂ ಎಲ್ ಸಿ, ಹಾಗೂ ಸ್ಪೀಕರ್ ಯು ಟಿ ಖಾದರ್ ಅವರ ಶಿಫಾರಸ್ಸಿನ ಮೇರೆಗೆ
ಪೌರಾಡಳಿತ ಸಚಿವರಾದ ರಹೀಮ್ ಖಾನ್ ನೇಮಕಾಮಾಡಿದ್ದಾರೆ.
- Tuesday
- December 3rd, 2024