ವಿಶ್ವದಲ್ಲಿ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಲೋಕಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗದ ಮಖ್ಯಸ್ಥರಾದ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.
ಒಟ್ಟು ಮತದಾರರ ಸಂಖ್ಯೆ 97 ಕೋಟಿ.
10 .5 ಲಕ್ಷ ಮತಗಟ್ಟೆಗಳ ಸ್ಥಾಪನೆ
ಚುನಾವಣಾ ದಿನಾಂಕ ಈ ಕೆಳಗಿನಂತಿವೆ
ದೇಶದಲ್ಲಿ 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತದ ಮತದಾನಗಳು ನಡೆಯಲಿವೆ ಅಲ್ಲದೆ ಕರ್ನಾಟಕದಲ್ಲಿ ಒಂದು ಕ್ಷೇತ್ರಕ್ಕೆ ಉಪಚುಣಾವಣೆ ನಡೆಯಲಿದೆ.
ಮಾರ್ಚ್ 20 ರಿಂದ ಮೊದಲ ಹಂತದ ಚುನಾವಣಾ ಪ್ರಕ್ರಿಯೆಗೆ ಚಾಲನೆ ಸಿಗಲಿದ್ದು ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಎಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದೆ
ಜೂನ್ 4ರಂದು ಮತೆಣಿಕೆ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.