- Wednesday
- April 2nd, 2025

ಮಾರ್ಚ್ 22 ಮತ್ತು 23 ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ನಲ್ಲಿ ನಡೆದ ಮ್ಯಾನೇಜ್ಮೆಂಟ್ ಫೆಸ್ಟಿನಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ದ್ವಿತೀಯ ಬಿಕಾo ನ ವಿದ್ಯಾರ್ಥಿನಿ ಮಯೂರಿ ಇವರು ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿಜೇತರನ್ನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ ಟಿ ಇವರು ಅಭಿನಂದಿಸಿದ್ದಾರೆ.

ಚಾಲಕನಿಗೆ ನಿದ್ರೆ ಜಾರಿದ್ದರಿಂದ ಇನ್ನೋವ ಕಾರು ನಿಯಂತ್ರಣ ತಪ್ಪಿ ಗೂನಡ್ಕದಲ್ಲಿ ಮೋರಿಗೆ ಢಿಕ್ಕಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾರು ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದು, ಗೂನಡ್ಕದ ಶಿರಾಡಿ ದೈವಸ್ಥಾನದ ದ್ವಾರದ ಬಳಿ ಮೋರಿಗೆ ಢಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿರುವುದಾಗಿ ತಿಳಿದುಬಂದಿದೆ.

ಕೇರಳದಲ್ಲಿ 7.25 ಕೋಟಿ ಖೋಟಾ ನೋಟು ಪತ್ತೆ – ಸುಳ್ಯದ ಸುಲೈಮಾನ್ ಹಾಗೂ ಪೆರಿಯಾ ನಿವಾಸಿ ಅಬ್ದುಲ್ ರಜಾಕ್ ಪೊಲೀಸರ ವಶಕ್ಕೆ
2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾದ ಘಟನೆ ಕಾಸರಗೋಡು ಜಿಲ್ಲೆಯ ಕಾಞಾಂಗಾಡ್ ಸಮೀಪ ಅಂಬಲತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ಹೇಳಲಾಗುತ್ತಿದೆ. ಸುಳ್ಯ ನಿವಾಸಿ ಸುಲೈಮಾನ್ ಸಹಿತ ಹಾಗೂ ಇಬ್ಬರನ್ನು ಪೋಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಅಂಬಲತರ ಠಾಣಾ ವ್ಯಾಪ್ತಿಯ ಪೊಲೀಸರು ಈ...

ಪುಸ್ತಕದಲ್ಲಿರುವ ವಿಷಯಗಳನ್ನು ಮಾತ್ರವಲ್ಲದೆ ನಿಜ ಜೀವನದಲ್ಲಿ ಸಿಗುವ ಕೆಲವೊಂದು ಮೌಲ್ಯಗಳನ್ನು ನಾವು ಮೈಗೂಡಿಸಿಕೊಳ್ಳಬೇಕು. ಸಮಾಜದ ಉತ್ತಮ ವ್ಯಕಿಗಳ ಆದರ್ಶ ಗುಣಗಳನ್ನು ತಿಳಿದುಕೊಂಡು ಆದರ್ಶ ವ್ಯಕ್ತಿಗಳಾಗಿ, ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಬದುಕಿದಾಗ ಬದುಕು ಸಾರ್ಥಕವಾಗಲು ಸಾಧ್ಯ ಎಂದು ಬೆಳ್ಳಾರೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೆಶಕರಾದ ಡಾ ರಾಮಚಂದ್ರ ಕೆ ಹೇಳಿದರು.ಅವರು...

ಲೋಕಸಭಾ ಚುನಾವಣೆಗೆ ಈ ಬಾರಿ ಭ್ರಷ್ಟಚಾರಿಗಳ ವಿರುದ್ಧ ನಿರಂತರ ಧನಿ ಎತ್ತುತ್ತಿರುವ ರವಿಕೃಷ್ಣಾ ರೆಡ್ಡಿ ಸಾರಥ್ಯದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆ.ಆರ್.ಎಸ್.) ಕೂಡ ಎಂಟ್ರಿಯಾಗಲಿದ್ದು ದ.ಕ. ಕ್ಷೇತ್ರ ದಿಂದ ಕೆ.ಆರ್.ಎಸ್. ಪಕ್ಷದ ಅಭ್ಯರ್ಥಿಯಾಗಿ ಸುಳ್ಯದ ರಂಜಿನಿ ಮೊಟ್ಟೆಮನೆ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದಾರೆ. ಇವರು ದೇವಚಳ್ಳ ಗ್ರಾಮದ ಎಲಿಮಲೆಯ ಮೊಟ್ಟೆಮನೆ ದಿ.ಶಿವಪ್ಪ ಗೌಡರ ಪುತ್ರಿ. ಬೆಂಗಳೂರಿನಲ್ಲಿ ಭ್ರಷ್ಟಾಚಾರದ...

ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ, ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 30-2024 ಕಲಂ 380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿ ಮಂಡೆಕೋಲು ಗ್ರಾಮ, ಸುಳ್ಯ ನಿವಾಸಿ ಸುಪೀತ್ ಕೆ (20) ಎಂಬಾತನನ್ನು ವಶಕ್ಕೆ ಪಡೆದು,...

ಸಂಪಾಜೆ: ಸ್ವಾಮಿ ಕೊರಗಜ್ಜ ದೈವದ ಸನ್ನಿಧಿ ಚೆಡಾವು ಸಂಪಾಜೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ ಮಾ.23 ಮತ್ತು 24 ರಂದು ನಡೆಯಲಿದೆ.ಮಾ. 23 ರಂದು ಸಂಜೆ 7.30 ರಿಂದ ಚೌಕಾರು ಮಂತ್ರವಾದಿ ಗುಳಿಗ ದೈವದ ನೇಮ, ರಾತ್ರಿ 9.00 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 10 ರಿಂದ ಕಲ್ಲುರ್ಟಿ, ಅಣ್ಣಪ್ಪ ಪಂಜುರ್ಲಿ ದೈವಗಳ ನೇಮ ನಡೆದು,...

ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಪಾಜೆಯ ವ್ಯಕ್ತಿ ಮೃತ ಪಟ್ಟ ಘಟನೆ ವರದಿಯಾಗಿದೆ.ಸಂಪಾಜೆ ಗ್ರಾಮದ ಕಲ್ಲುಗುಂಡಿ ಮೇಲಿನ ಪೇಟೆಯಲ್ಲಿ ರಸ್ತೆ ಬದಿಯಲ್ಲಿರುವ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಕಳೆದ ವಾರ ನಡೆದಿತ್ತು. ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ದ.ಕ. ಸಂಪಾಜೆ ಗ್ರಾಮದ...

ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಗೊಂಡ ಪದ್ಮರಾಜ್ ಅವರು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಇರುವ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ತೆರಳಿ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ, ಉಪಾಧ್ಯಕ್ಷರಾದ...

ಇತ್ತೀಚೆಗೆ ಕೊಲ್ಲಮೊಗ್ರದಲ್ಲಿ ಗೋಹತ್ಯೆ ನಡೆದಿದೆ ಎನ್ನಲಾದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಹಿಂದೂ ಸಂಘಟನೆಗಳಿ ಆಕ್ರೋಶ ವ್ಯಕ್ತವಾಗಿತ್ತು. ಮಾಧ್ಯಮಗಳಲ್ಲಿ ವರದಿ ಬಂದ ಬಳಿಕ ಪೋಲಿಸರು ಸ್ಥಳ ತನಿಖೆ ನಡೆಸಿ ತೆರಳಿದ್ದರು. ಘಟನೆ ಕೆಲ ತಿಂಗಳ ಹಿಂದೆ ನಡೆದಿದ್ದು ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂಬ ನೆಪವೊಡ್ಡಿ , ಸ್ಥಳೀಯರು ಕೇಸು ನೀಡಿದ್ದರೂ ಪ್ರಕರಣ ದಾಖಲಿಸದೇ ಮುಚ್ಚಿ...

All posts loaded
No more posts