
ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಪಾಜೆಯ ವ್ಯಕ್ತಿ ಮೃತ ಪಟ್ಟ ಘಟನೆ ವರದಿಯಾಗಿದೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿ ಮೇಲಿನ ಪೇಟೆಯಲ್ಲಿ ರಸ್ತೆ ಬದಿಯಲ್ಲಿರುವ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಕಳೆದ ವಾರ ನಡೆದಿತ್ತು. ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ದ.ಕ. ಸಂಪಾಜೆ ಗ್ರಾಮದ ಚೆಡಾವಿನ ಲೋಹಿತ್ ಪೂಜಾರಿ(42) ಎಂಬವರು ಮಾ.22ರಂದು ಸಂಜೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.