
ಸಂಪಾಜೆ ಚೆಡಾವು ಸ್ವಾಮಿ ಕೊರಗಜ್ಜ ದೈವದ ಸನ್ನಿಧಿಯಲ್ಲಿ ವಾರ್ಷಿಕ ನೇಮೋತ್ಸವವು ಮಾ. 23 ಮತ್ತು 24 ರಂದು ನಡೆಯಿತು. ಪೂಜಾ ವಿಧಿ ವಿಧಾನಗಳೊಂದಿಗೆ ಚೌಕಾರು ಮಂತ್ರವಾದಿ ಗುಳಿಗ, ಕಲ್ಲುರ್ಟಿ, ಅಣ್ಣಪ್ಪ ಪಂಜುರ್ಲಿ, ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ ವಿಜ್ರಂಭಣೆಯಿಂದ ನಡೆಯಿತು. ಕಾರ್ಯಕ್ರಮಕ್ಕೆ ವಿರಾಜಪೇಟೆ ಶಾಸಕರು, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ಭಾಗವಹಿಸಿ ದೈವದ ಆಶೀರ್ವಾದ ಪಡೆದರು.ರಾತ್ರಿ ಮತ್ತು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಸಾವಿರಾರು ದೈವ ಭಕ್ತರು ಭಾಗವಹಿಸಿ, ದೈವಗಳ ಸಿರಿ ಮುಡಿ,ಗಂಧ ಪ್ರಸಾದ ಸ್ವೀಕರಿಸಿದರು.