Ad Widget

ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ – ಕುಕ್ಕೆಯಲ್ಲಿ ಹೇಳಿಕೆ ನೀಡಿದ ಡಿ.ಕೆ. ಶಿವಕುಮಾರ್

ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ತದನಂತರ ಹೊಸಳಿಗಮ್ಮ ದೈವದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ .ಅದರೊಂದಿಗೆ ದೇವರ ಆಶೀರ್ವಾದ ಬೇಡಲು ಧರ್ಮಸ್ಥಳ .ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಶೃಂಗೇರಿ, ಗೌರಿಗದ್ದೆ, ಗೋಕರ್ಣ, ಮುಂತಾದ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಉದ್ದೇಶ ನಮ್ಮದಾಗಿದೆ. ನಮಗೆ ದೇವರಲ್ಲಿ ಸಂಪೂರ್ಣ ನಂಬಿಕೆ ಇದೆ ಧರ್ಮದ ಬಗ್ಗೆ ನಂಬಿಕೆ ಇದೆ ಎಂದರು . ಈ ಹಿಂದೆ ನಡೆದ ರಾಜ್ಯ ಅಸೆಂಬ್ಲಿ ಚುನಾವಣೆಯಲ್ಲಿ ಕೂಡ ಕೂಡ ದೇವರು ನಮ್ಮನ್ನ ಕೈ ಬಿಟ್ಟಿಲ್ಲ. ಒಳ್ಳೆಯದನ್ನೇ ಮಾಡಿದ್ದಾರೆ. ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದರು. ತದನಂತರ  ನಕ್ಸಲರು ಶಂಕೆ ಇರುವಂತ ಕೂಜುಮಲೆ ಹಾಗೂ ಐನೆಕಿದು ಗ್ರಾಮಗಳ ಮನೆಗಳಿಗೆ ಬಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಈ ಬಗ್ಗೆ ಪೊಲೀಸ ಅಧಿಕಾರಿ ಗಳೊಂದಿಗೆ ಮಾತನಾಡುತ್ತೇನೆ. ಹಾಗೆ ಕೋವಿ ಪರವಾನಿಗೆ ಇರ್ತಕ್ಕಂತವರು ಡಿಪೋಸಿಟ್ ಮಾಡ ಬೇಕೋ ಬೇಡವ ಎನ್ನುವ ಬಗ್ಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಲ್ಲಿ ಚರ್ಚಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿಸಿ ಜಯರಾಮ, ಕಡಬ ಬ್ಲಾಕ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಕಾಂಗ್ರೆಸ್  ಮುಖಂಡರುಗಳಾದ ಭರತ್ ಮುಂಡೋಡಿ, ಧನಂಜಯ ಅಡ್ಪಂಗಾಯ , ಮಮತಾ ಗಟ್ಟಿ, ಅಶೋಕ್ ನೆಕ್ರಾಜೆ , ಪಿ ಬಿ ವರ್ಗೀಸ್, ಮಾಧವ ಮಾನಾಡು, ಕೃಷ್ಣಪ್ಪ,  ದಿನೇಶ್ ಮಡ್ತಿಲ್, ಹರೀಶ ಇಂಜಾಡಿ ,ರಾಜೀವ್ ರೈ, ವಿಜಯಕುಮಾರ ಸೊರಕೆ, ವಿಮಲ ರಂಗಯ್ಯ, ಸರಸ್ವತಿ ಕಾಮತ್, ಶಿವರಾಮ ರೈ, ಕೃಷ್ಣಮೂರ್ತಿ ಭಟ್  ಮುಂತಾದವರು ಹಾಜರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!