
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ ಆಗಮಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯ ಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿ, ಹೊಸೋಳಿಗಮ್ಮನ ದರ್ಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭ ಕಡಬ ಬ್ಲಾಕ್ ನ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಧನಂಜಯ ಅಡ್ಪಂಗಾಯ, ಕೃಷ್ಣಪ್ಪ, ಮಾದವ ದೇವರಗದ್ದೆ, ಮಮತಾ ಗಟ್ಟಿ, ಮೊದಲಾದವರು ಉಪಸ್ಥಿತರಿದ್ದರು.