Ad Widget

ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಡಿಸಿಎಂ ಡಿಕೆ ಶಿವಕುಮಾರ್ ಗೆ ಮನವಿ


ಕುಕ್ಕೆ ಸುಬ್ರಹ್ಮಣ್ಯ ಮಾ.26: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ 24*7 ವೈದ್ಯಕೀಯ ಸೇವೆ ಸೌಲಭ್ಯವಾಗುವಂತೆ ಮಾಡಬೇಕೆಂದು ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಕರ್ನಾಟಕ ಸರ್ಕಾರ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಮಾರ್ಚ್ 26ರಂದು ಮನವಿ ನೀಡಲಾಯಿತು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ನೀಡಲಾಗಿದ್ದು ಮಾನವಿ ಸ್ವೀಕರಿಸಿದ ಅವರು ಶೀಘ್ರವಾಗಿ ತುರ್ತುಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು, ಪದಾಧಿಕಾರಿಗಳು ಹಾಗೂ ಟ್ರಸ್ಟ್ ನ ಸದಸ್ಯರು ಉಪಸ್ಥಿತರಿದ್ದು ಮನವಿ ನೀಡಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading