Ad Widget

ಕುಕ್ಕೆ ಸುಬ್ರಮಣ್ಯ : ನಿರಂತರ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ರವಿ ಕಕ್ಕೆಪದವು ಸಮಾಜ ಸೇವಾ ತಂಡ

ಕುಕ್ಕೆ ಸುಬ್ರಮಣ್ಯದ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನವರು ಕುಮಾರಧಾರದ ದ್ವಾರದಿಂದ ಕಾಶಿ ಕಟ್ಟೆ ವರೆಗಿನ ಮುಖ್ಯರಸ್ತೆಯ ಎರಡು ಬದಿಗಳಲ್ಲಿ ಹಾಗೂ ಕಾಶಿ ಕಟ್ಟೆ ಸುತ್ತಮುತ್ತಲಿನ ಪರಿಸರದಲ್ಲಿ ಇದ್ದಂತಹ ಕಸ ಕಡ್ಡಿಗಳು, ಪ್ಲಾಸ್ಟಿಕ್ ಬಾಟಲಿಗಳು, ಪ್ಲಾಸ್ಟಿಕ್ ಚೀಲ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನು ಹೆಕ್ಕಿ ಸ್ವಚ್ಛತಾ ಕಾರ್ಯ ಕೈಗೊಂಡರು. ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಿನದಿಂದ ದಿನಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಾ ಇರೋದು ಸಾಮಾನ್ಯ. ಇದೀಗ ನಿರಂತರವಾಗಿ ಪುಣ್ಯಕ್ಷೇತ್ರಕ್ಕೆ ಬರುವಂತಹ ಭಕ್ತಾದಿಗಳು ಮಾರ್ಗದ ಇಕ್ಕಲೆಗಳಲ್ಲಿ ಕಸ ಕಡ್ಡಿಗಳನ್ನು ಎಸೆದಿರುವುದು ಮನಗಂಡ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು ಅವರ ಮಾರ್ಗದರ್ಶನದಲ್ಲಿ ಇಂದಿನ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ‌ ಸುಮಾರು 50ಕ್ಕೂ ಮಿಕ್ಕಿ ಸ್ವಯಂ ಸೇವಕರು ನಿರಂತರ ಶ್ರಮಸೇವೆ ನಡೆಸುತ್ತಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading