ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಕಾರ್ಯಕರ್ತರ ಸಮಾವೇಶವು ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಮಾ. 29 ರಂದು ನಡೆಯುತ್ತಿದ್ದು ಈ ಸಭೆಯಲ್ಲಿ ಕಾರ್ಯಕರ್ತರು ಕಿಕ್ಕಿರಿದು ಭಾಗವಹಿಸಿದ್ದಾರೆ.
ಈ ಕಾರ್ಯಕರ್ತರ ಸಮಾವೇಶದ ವೇದಿಕೆಯಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಬಿಜೆಪಿ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ, ಮಾಜಿ ಸಚಿವರಾದ ಎಸ್ ಅಂಗಾರ, ಭಾಗೀರಥಿ ಮುರುಳ್ಯ, ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ , ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ , ಅಪ್ಪಯ್ಯ ಮಣಿಯಾಣಿ , ಸೀತರಾಮ ಬೇಳಾಲ್ , ಕಿಶೋರ್ ಕುಮಾರ್ ಬೊಟ್ಯಾಡಿ , ಯತೀಶ್ ಆರ್ವಾರ್ , ಹರೀಶ್ ಕಂಜಿಪಿಲಿ , ವಿನಯ ಕುಮಾರ್ ಮುಳುಗಾಡು , ದೇವದಾಸ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಸ್ವಾಗತಿಸಿ, ವೆಂಕಟ್ ವಳಲಂಬೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಭಾ ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.