ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರಿಗೆ ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಯನ್ನು ಮಾರ್ಚ್ 29, 2024 ರಂದು ಬೆಂಗಳೂರಿನ ಬಾಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ನಡೆದ ವಿಶ್ವ ಕನ್ನಡ ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಮ್ಮೇಳನದಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ರಾಜ್ಯದ 25 ಮಹಿಳಾ ಸಾಧಕಿಯರನ್ನು ಪುರಸ್ಕರಿಸಿದ ಈ
ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷೆ ಕಮಲ ರಾಜೇಶ್, ಸಮಾಜ ಸೇವಕಿ, ಸೂರಜ್ ಫೌಂಡೇಷನ್ ಸಂಸ್ಥಾಪಕಿ ಸುಜಾತ ಎಸ್ ಮುನಿರಾಜು, ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕಿ ಎಸ್ ಜಲಜಾಕ್ಷಿ, ಡಾ. ಜಯಂತಿ, ಇಂದು ಸಂಜೆ ಪತ್ರಿಕೆಯ ಡಾ. ಪದ್ಮ ನಾಗರಾಜು, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಪದ್ಮಿನಿ ನಾಗರಾಜು, ವಿಶ್ವ ಕನ್ನಡ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಈ ರಮೇಶ್, ಗೌರವಾಧ್ಯಕ್ಷೆ ಆರ್ ಶೈಲಜ ಬಾಬು ಮೊದಲಾದವರು ಉಪಸ್ಥಿತರಿದ್ದರು.
- Tuesday
- December 3rd, 2024