Ad Widget

ಕಡಬ : ಗೋವು ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು – ರಾತ್ರೋರಾತ್ರಿ ಬಿಜೆಪಿ ಪ್ರತಿಭಟನೆ – ಧರಣಿ ಕುಳಿತ ಭಾಗೀರಥಿ ಮುರುಳ್ಯ ಹಾಗೂ ಹರೀಶ್ ಪೂಂಜ

ಅಕ್ರಮ ಗೋವು ಸಾಗಟದ ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.

ವಿಷಯ ತಿಳಿದ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಘಟನೆಯ ವಿರುದ್ದ ರೊಚ್ಚಿಗೆದ್ದ ಹಿಂದೂ ಸಂಘಟನೆಗಳು ಕಡಬ ಆಸ್ಪತ್ರೆಯ ಬಳಿ ಮೊದಲು ಬೃಹತ್ ಪ್ರತಿಭಟನೆ ಆರಂಭವಾಗಿತ್ತು. ನಂತರ ಕಡಬ ಪೇಟೆಯ ಮುಖ್ಯ ಜಂಕ್ಷನ್ ಬಳಿ ರಾಜ್ಯ ರಸ್ತೆ ತಡೆದು ತಡ ರಾತ್ರಿ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಕಡಬ ಮತ್ತು ಸುಬ್ರಹ್ಮಣ್ಯ ಪೊಲೀಸರು ಆಗಮಿಸಿದ್ದು ಪ್ರತಿಭಟನಾ ನಿರತರನ್ನು ಮನವೊಲಿಸುವ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಆದರೆ ಯಾವುದಕ್ಕೂ ಜಗ್ಗದ ಪ್ರತಿಭಟನಾಕಾರರು ಎಸ್.ಪಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!