ಕಾರ್ಯಕರ್ತ ಸಮಾವೇಶದ ಹೇಳಿಕೆಯ ಪ್ರಶ್ನೆಗಳಿಗೆ ಉತ್ತರಿಸಿದ ಶಾಸಕಿ ಭಾಗೀರಥಿ ಮುರುಳ್ಯ
ಅಭಿವೃದ್ಧಿ ಆಗಿರುವುದು ಬಿಜೆಪಿ ಅವಧಿಯಲ್ಲಿ, ಕಾಂಗ್ರೆಸ್ ಏನು ಅಭಿವೃದ್ಧಿ ಮಾಡಿದೆ – ಹರೀಶ್ ಕಂಜಿಪಿ
ಎಪ್ರಿಲ್ 04 ರಂದು ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಮುಂಜಾನೆ 9 ಗಂಟೆಗೆ ಲೇಡಿಹಿಲ್ ಬಳಿ ಇರುವ ಚುನಾವಣಾ ಕಛೇರಿಯಿಂದ ಪಾದಯಾತ್ರೆ ಮೂಲಕ ಸಾಗಿ ಬಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಹೇಳಿದರು.
ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಮೋದಿ ನೇತೃತ್ವದ ಸರಕಾರವು ದೇಶದಲ್ಲಿ ಅಭಿವೃದ್ಧಿ ಮತ್ತು ರಕ್ಷಣೆಯ ವಿಚಾರ ಸೇರಿದಂತೆ ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡಿದ್ದು ಇದೀಗ ಮೂರನೇ ಬಾರಿಗೆ ಪ್ರಧಾನಿಗಳಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ 400 ಕ್ಕು ಅಧಿಕ ಸ್ಥಾನವನ್ನು ಗೆಲ್ಲಲಿದೆ ಎಂದು ಹೇಳಿದರು. ಅಲ್ಲದೆ ಎಪ್ರಿಲ್ 8 ರಂದು ಮಹಿಳಾ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು . ಅಲ್ಲದೇ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಸುಳ್ಯದಿಂದ ಸುಮಾರು ಮೂರು ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡುತ್ತಾ ದೇಶದ ಪ್ರಧಾನಿ ಮೋದಿಯವರು ಮಹಿಳೆಯರಿಗೆ ಇದೀಗ ಹಲವಾರು ಅವಕಾಶಗಳನ್ನು ನೀಡಿದ್ದು ಅಲ್ಲದೆ ಶೇಕಡಾ 33 ರಷ್ಟು ಮೀಸಲಾತಿ ನೀಡಲಾಗಿದೆ. ಇದೀಗ ಗ್ರಾಮ ಪಂಚಾಯತ್ ನಿಂದ ಹಿಡಿದು ಲೋಕಸಭೆಯ ವರೆಗೆ ಮೀಸಲಾತಿ ನೀಡಲಾಗುತ್ತಿದೆ ಎಂದು ಹೇಳಿದರು. ಅಲ್ಲದೆ ಎಪ್ರಿಲ್ 8 ರಂದು ಕಡಬದ ಆಲಂಕಾರಿನಲ್ಲಿ ಮಹಿಳಾ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಗಳು ಇದೀಗ ತುರ್ತಾಗಿ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಬೂತ್ ಮಟ್ಟದಲ್ಲಿ ಮಹಿಳೆಯರನ್ನು ಸೇರಿಸಿಕೊಂಡು ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗುವುದು ಎಂದು ಹೇಳಿದರು. ಅಲ್ಲದೆ ಕಾರ್ಯಕರ್ತರ ಸಮಾವೇಶದಲ್ಲಿ ಸುಳ್ಯದ ಅಭಿವೃದ್ಧಿಯಾಗಿಲ್ಲಾ ಅನುದಾನಗಳು ಬರುತ್ತಿಲ್ಲ ಎಂದು ಹೇಳಿದ್ದರು. ಆದರೆ ಆ ಹೇಳಿಕೆ ಈಗಿನ ಸಿದ್ದರಾಮಯ್ಯರವರ ಸರಕಾರ ಅನುದಾನ ನೀಡುತ್ತಿಲ್ಲ ಈ ಹಿಂದಿನ ಸರಕಾರದಲ್ಲಿ ಸಚಿವರಾಗಿದ್ದ ಅಂಗಾರರವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿಯ ಕೆಲಸಗಳು ಆಗಿವೆ ಆದರೆ ಈಗಿನ ಸರಕಾರ ಅನುದಾನ ನೀಡುತ್ತಿಲ್ಲ ಎಂದು ಹೇಳಿದ್ದು ಎಂದು ಸ್ಪಷ್ಟ ಪಡೆಸಿದರು.
ಮಂಡಲ ಮಾಜಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಮತನಾಡುತ್ತಾ ನಳೀನ್ ಕುಮಾರ್ ಕಟೀಲ್ ಮತ್ತು ಬಿಜೆಪಿ ಅವಧಿಯಲ್ಲಿ ಮಾತ್ರ ಅಭಿವೃದ್ಧಿಗಳು ಆಗಿರುವುದು ಕಾಂಗ್ರೆಸ್ ಏನು ಮಾಡದೇ ಮಾಡಿದ್ದೆವೆ ಮತ್ತು ಅಂಕಿ ಅಂಶಗಳನ್ನು ಕೇಳುವುದರಲ್ಲೆ ಕಾಲ ಕಳೆಯುತ್ತಿದೆ ಎಂದು ಹೇಳಿದರು. ಅಲ್ಲದೇ ಸಂಸದರು ಹೇಳಿರುವ 3000 ಕೋಟಿ ಅನುದಾನಗಳು ರಸ್ತೆಗಳಿಗೆ ಮಾತ್ರವಲ್ಲ ಅದು ಪ್ರತಿ ಗ್ರಾಮ ಪಂಚಾಯತ್ ಗಳಿಗೆ ಬಂದಿರುವ ಜೆಜೆಎಂ, ಬೆಳೆವಿಮೆ, ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಎಲ್ಲವು ಕೇಂದ್ರದ ಅನುದಾನಗಳು ಎಂದು ಹೇಳುತ್ತಾ ಇದೀಗ ಕೆಲವು ರಸ್ತೆಗಳ ಅಭಿವೃದ್ಧಿ ಬಾಕಿ ಉಳಿದಿದೆ ಅವುಗಳನ್ನು ನಮ್ಮ ಶಾಸಕರು ಕೆಲವು ಕಡೆಗಳಿಗೆ ಅನುದಾನ ನೀಡುತ್ತಿದ್ದಾರೆ ಅವುಗಳಿಗೆ ಎಲ್ಲಾವುಗಳನ್ನು ಕೂಡ ಪೂರ್ಣವಾಗಿ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೆವೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ದ.ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ಸುಳ್ಯ ಪ್ರಭಾರಿ ರವೀಂದ್ರ ಶೆಟ್ಟಿ ಉಳಿದೊಟ್ಟು, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ಎ.ವಿ.ತೀರ್ಥರಾಮ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಮಹೇಶ್ ಜೋಗಿ, ಬಿಜೆಪಿ ಕೋಶಾಧಿಕಾರಿ ಸುಭೋದ್ ಶೆಟ್ಟಿ ಮೇನಾಲ, ಬಿಜೆಪಿ ನಗರ ಮಹಾಶಕ್ತಿಕೇಂದ್ರದ ಅಧ್ಯಕ್ಷ ಎ.ಟಿ.ಕುಸುಮಾಧರ, ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಿಕ್ರಮ್ ಅಡ್ಡಂಗಾಯ, ನಿರ್ದೇಶಕ ಹೇಮಂತ್ ಕಂದಡ್ಕ, ನ.ಪಂ. ಸದಸ್ಯೆ ಶಶಿಕಲಾ ನೀರಬಿದಿರೆ, ಸಾಮಾಜಿಕ ಜಾಲತಾಣದ ಜಿಲ್ಲಾ ಸಮಿತಿ ಸದಸ್ಯ ಪ್ರಸಾದ್ ಕಾಟೂರು, ಎ.ವಿ. ತೀರ್ಥರಾಮ ಉಪಸ್ಥಿತರಿದ್ದರು.