Ad Widget

ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ ಯವರು ಏ.3ರಂದು ನಾಮಪತ್ರ ಸಲ್ಲಿಸಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಗೊಂಬೆ, ಚೆಂಡೆವಾದನ ದೊಂದಿಗೆ ತೆರೆದ ವಾಹನದೊಂದಿಗೆ ಮೆರವಣಿಗೆಯಲ್ಲಿ ಕಾರ್ಯಕರ್ತರ ಜೊತೆ ಸಾಗಿ ನಾಮಪತ್ರ ಸಲ್ಲಿಸಿದರು.

ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ರಮಾನಾಥ ರೈ ಹಿರಿಯ ನಾಯಕರಾದ, ಬಿ ಕೆ ಹರಿಪ್ರಸಾದ್, ಶಾಸಕರಾದ ಅಶೋಕ್ ರೈ, ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ, ಜೆ.ಆರ್ ಲೋಬೋ, ಪಕ್ಷದ ಮುಖಂಡರಾದ ಐವನ್‌ ಡಿಸೋಜ, ಇನಾಯತ್ ಆಲಿ, ರಕ್ಷಿತ್ ಶಿವರಾಮ್, ಮಿಥುನ್ ರೈ, ಡಾ.ರಘು ಸೇರಿದಂತೆ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!