Ad Widget

ಎ.10,11: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.10 ಮತ್ತು ಎ.11 ರಂದು ನಡೆಯಲಿದೆ.
ಎ.10ರಂದು ರಾತ್ರಿ ಗಂಟೆ 7.00ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಪೂಜಾ ಬಲಿ, ಮಹಾಪೂಜೆ, ಗಣಪತಿ ದೇವರಿಗೆ ಮೂಡಪ್ಪ ಸೇವೆ ಮತ್ತು ರಂಗಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಎ.11ರಂದು ಬೆಳಿಗ್ಗೆ ಗಂಟೆ 7.30 ರಿಂದ 108 ತೆಂಗಿನಕಾಯಿ ಮಹಾಗಣಪತಿ ಹೋಮ, ಚಂಡಿಕಾಹೋಮ, ಶ್ರೀ ಸತ್ಯನಾರಾಯಣ ಪೂಜೆ, ಬಿಂಬ ಶುದ್ಧಿ, ಪಂಚವಿಂಶತಿ ಕಲಶ ಪೂಜೆ ನಡೆಯಲಿದೆ. ಬೆಳಿಗ್ಗೆ ಗಂಟೆ 11.00ಕ್ಕೆ ಹೋಮದ ಪೂರ್ಣಾಹುತಿ, ಸುವಾಸಿನಿ ಪೂಜೆ ಮಧ್ಯಾಹ್ನ ಶ್ರೀ ದೇವರಿಗೆ ಪಂಚಾಮೃತಾಭಿಷೇಕ, ಪಂಚವಿಂಶತಿ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!