ಕೆಎಫ್ ಡಿಸಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೌಕರರಿಗೆ ನಿಗಮದ ಮೌಖಿಕ ಆದೇಶ ನೀಡಿ ಕೆಲಸದಿಂದ ವಜಾ,ಆದೇಶಕ್ಕೆ ತಾತ್ಕಾಲಿಕ ತಡೆ

ಸುಮಾರು 12 ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕೆ ಎಫ್ ಡಿ ಸಿಯಲ್ಲಿ ನೌಕರರಾಗಿ ಕೆಲಸ ನಿರ್ವಹಿಸುತ್ತಿರುವ ಮೇಲ್ವಿಚಾರಕ ನೌಕರರನ್ನು ನಿಗಮದಿಂದ ಬಂದ ತುರ್ತು ಆದೇಶದಂತೆ ಕೆಲಸದಿಂದ ಬಿಡುಗಡೆಗೊಳಿಸಿರುವ ಕುರಿತು ತಮಿಳು ಕಾರ್ಮಿಕ ಮುಖಂಡರು ಮತ್ತು ಕಾರ್ಮಿಕರ ನಿಯೋಗ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿಸಿ ಜಯರಾಮ್ ಮತ್ತು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್ ಜಯಪ್ರಕಾಶ್ ರೈ ಯವರನ್ನು ಭೇಟಿಯಾಗಿ ಗಮನಕ್ಕೆ ತಂದರು.

. . . . . . . . .



ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ಬಿ ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರ ಗಮನಕ್ಕೆ ತಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ದೂರವಾಣಿ ಕರೆ ಮೂಲಕ ಸಂಪರ್ಕಿಸಿ ನೀಡಿರುವ ಆದೇಶಕ್ಕೆ ತಾತ್ಕಾಲಿಕ ತಡೆ ತಂದು ಕಾರ್ಮಿಕರ ಸಮಸ್ಯೆಗೆ ಕೂಡಲೇ ಸ್ಪಂದಿಸಿದರು.
ನಿಯೋಗದಲ್ಲಿ ಕಾರ್ಮಿಕ ಮುಖಂಡರಾದ ಚಂದ್ರಲಿಂಗಮ್, ಶಿವಕುಮಾರ್ ಕೌಡಿಚಾರ್, ರಾಮಸ್ವಾಮಿ (ಆನಂದ), ಕಣ್ಣ ದಾಸ್ ಮೊದಲಾದವರು ಇದ್ದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಪಿ ಎಸ್ ಗಂಗಾಧರ್, ಪ್ರಮುಖರಾದ ಸುರೇಶ್ ಎಂ ಹೆಚ್, ಗೋಕುಲ್ ದಾಸ್, ಭವಾನಿಶಂಕರ್ ಕಲ್ಮಡ್ಕ, ನಂದರಾಜ್ ಸಂಕೇಶ್, ಚೇತನ್ ಕಜೆಗದ್ದೆ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading