ವಿಜ್ಞಾನ ವಿಭಾಗದಲ್ಲಿ ಬೃಂದಾ ಸುರೇಶ್ ರಾಜ್ಯದಲ್ಲಿ 10 ನೇ ರ್ಯಾಂಕ್ವಾ, ಣಿಜ್ಯ ವಿಭಾಗದಲ್ಲಿ ಸಂಜನಾ ರಾವ್ ರಾಜ್ಯದಲ್ಲಿ 7 ನೇ ರ್ಯಾಂಕ್
ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಲಭಿಸಿದ್ದು,ಒಟ್ಟು 129 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,78 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ 51 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಬೃಂದಾ ಸುರೇಶ್ 589 ಅಂಕ ಪಡೆದು ರಾಜ್ಯಕ್ಕೆ 10ನೇ ರ್ಯಾಂಕ್ ಹಾಗೂ ಪ್ರಥಮ್ ಶೇಖರ್ 588 ಅಂಕ ಪಡೆದು ರಾಜ್ಯಕ್ಕೆ 11ನೇ ರ್ಯಾಂಕ್ ಪಡೆದು ವಿಜ್ಞಾನ ವಿಭಾಗದಲ್ಲಿ ದಾಖಲೆ ನಿರ್ಮಿಸಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಸಂಜನಾ ರಾವ್ ಎಚ್ 591 ಅಂಕ ಪಡೆದು ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದು ವಾಣಿಜ್ಯ ವಿಭಾಗದಲ್ಲಿ ದಾಖಲೆ ನಿರ್ಮಿಸಿರುತ್ತಾರೆ. ರೌದ ಅಶ್ರಫ್ 581 ಅಂಕ
ಗಳಿಸಿರುತ್ತಾರೆ. ಇವರಿಗೆ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ, ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ, ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಭೋದಕ ಹಾಗೂ ಭೋದಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.