*ದೇವಳದಲ್ಲಿ ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆ*
ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.10 ಮತ್ತು ಎ.11 ರಂದು ನಡೆಯಿತು.
ಎ.10ರಂದು ರಾತ್ರಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಪೂಜಾ ಬಲಿ, ಮಹಾಪೂಜೆ, ಗಣಪತಿ ದೇವರಿಗೆ ಮೂಡಪ್ಪ ಸೇವೆ ಮತ್ತು ರಂಗಪೂಜೆ, ಪ್ರಸಾದ ವಿತರಣೆ ನಡೆಯಿತು.
ಎ.11ರಂದು ಬೆಳಿಗ್ಗೆ 108 ತೆಂಗಿನಕಾಯಿ ಮಹಾಗಣಪತಿ ಹೋಮ, ಚಂಡಿಕಾಹೋಮ, ಶ್ರೀ ಸತ್ಯನಾರಾಯಣ ಪೂಜೆ, ಬಿಂಬ ಶುದ್ಧಿ, ಪಂಚವಿಂಶತಿ ಕಲಶ ಪೂಜೆ ನಡೆಯಿತು. ನಂತರ ಹೋಮದ ಪೂರ್ಣಾಹುತಿ, ಸುವಾಸಿನಿ ಪೂಜೆ ಮಧ್ಯಾಹ್ನ ಶ್ರೀ ದೇವರಿಗೆ ಪಂಚಾಮೃತಾಭಿಷೇಕ, ಪಂಚವಿಂಶತಿ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಕುಮಾರಮಂಗಲ, ಪ್ರಧಾನ ಅರ್ಚಕರಾದ ಶ್ರೀನಿವಾಸ ಹೆಬ್ಬಾರ್, ದೇವಸ್ಥಾನದ ಕಚೇರಿ ವ್ಯವಸ್ಥಾಪಕ ವಸಂತ ಪೆರುವಾಜೆ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರಾದ ಪಿ.ಪದ್ಮನಾಭ ಶೆಟ್ಟಿ ಪೆರುವಾಜೆ, ಹರ್ಷಿತ್ ಪೆರುವಾಜೆ ಹಾಗೂ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.