2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಮತದಾನ ಜಾಗೃತಿಗಾಗಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಇಂದು ನಡೆಯಿತು.
ಆರಂತೋಡು ಗ್ರಾಮ ಪಂಚಾಯತ್ ಮತ್ತು ನೆಹರು ಪದವಿ ಪೂರ್ವ ಕಾಲೇಜು ಅರಂತೋಡು, ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಎ.12 ರಂದು ಲೋಕಸಭಾ ಚುನಾವಣೆಯ ಮತದಾನದ ಕುರಿತು ಜಾಗೃತಿ ಕಾಲ್ನಡಿಗೆ ಜಾಥಾವು ನಲ್ಲಿ ನಡೆಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಪರಮೇಸ್ವರ್ ಮತದಾನದ ಜಾಗೃತಿಯ ಕುರಿತು ಮಾತನಾಡಿ ಮತದಾನ ಜಾಗೃತಿಯ ಪ್ರಮಾಣವಚನ ಬೋಧಿಸಿದರು. ಪಂಚಾಯತ್ ಉಪಾಧ್ಯಕ್ಷೆ ಭವಾನಿ ಚಿಟ್ಟನೂರು, ಚುನಾವಣಾ ಸೆಕ್ಟರ್ ಅಧಿಕಾರಿಗಳಾದ ಕಿಶೋರ್ ಕುಮಾರ್ ಕಿರ್ಲಾಯ, ಪಂಚಾಯತ್ ಸದಸ್ಯರಾದ ಶ್ರೀಮತಿ ಮಾಲಿನಿ ವಿನೋದ್ ಉಳುವಾರು, ಪುಷ್ಪರಾಜ್ ಕೊಡಂಕೇರಿ, ವೆಂಕಟರಮಣ ಪೆತ್ತಾಜೆ, ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳಾದ ಪದ್ಮ ಕುಮಾರ್, ಭವ್ಯರಾಜ್, ಆರಂತೋಡು ಸಹಕಾರಿ ಸಂಘದ ನಿರ್ದೇಶಕ ಕುಸುಮಾಧರ ಅಡ್ಕಬಳೆ, ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಅಧ್ಯಕ್ಷರಾದ ಸೋಮಶೇಖರ ಪೈಕ, ತಾಲೂಕು ಪಂಚಾಯಿತಿ ಸಿಬ್ಬಂದಿಗಳು, ಪಂಚಾಯಿತಿನ ಸಿಬ್ಬಂದಿ ವರ್ಗ, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಇಲಾಖೆಯ ಕಾರ್ಯಕರ್ತರು, ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಊರ ನಾಗರಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಅರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಮ್ ಆರ್ ಸ್ವಾಗತಿಸಿ, ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಕೇಶವ ಅಡ್ತಲೆ ವಂದಿಸಿದರು.