
ಮಂಡೆಕೋಲು ಗ್ರಾಮದ ಕುತ್ಯಾಡಿ ಎಂಬಲ್ಲಿ ಯುವಕನೋರ್ವ ಕುಸಿದುಬಿದ್ದು ತಲೆಗೆ ಏಟು ತಗುಲಿ ಮೃತಪಟ್ಟ ರೀತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಇದೀಗ ವರದಿಯಾಗಿದೆ. ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿದ್ದು,ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಚ್ವಿನ ತನಿಖೆಗಾಗಿ ವಿಧಿವಿಜ್ಞಾನ ಇಲಾಖೆಯ ತಂಡ ಆಗಮಿಸಲಿದೆ ಎನ್ನಲಾಗಿದೆ. ಮೃತಪಟ್ಟ ಯುವಕನನ್ನು ಸಚಿನ್ ಎಂದು ಹೇಳಲಾಗುತ್ತಿದ್ದು ಈತನು ಪೈಟಿಂಗ್ ವೃತ್ತಿಯನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು ಈ ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.