ಕೊಲ್ಲಮೊಗ್ರು, ಹರಿಹರ ಪಲ್ಲತ್ತಡ್ಕ, ಐನೆಕಿದು ಹಾಗೂ ಬಾಳುಗೋಡು ಗ್ರಾಮಗಳಲ್ಲಿ ಏ.17 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಬಿರುಸಿನ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಬ್ರಿಜೇಶ್ ಚೌಟ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ನ ಪ್ರಸಾದ್ ಕೋಡಿಯಡ್ಕ ಹಾಗೂ ಕಿಶನ್ ಕೂಟೇಲು ಬಿಜೆಪಿ ಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ, ಮಾಜಿ ಸಚಿವರಾದ ಎಸ್.ಅಂಗಾರ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಹಾಗೂ ಪ್ರಮುಖರಾದ ಹರೀಶ್ ಕಂಜಿಪಿಲಿ, ಹಿಮ್ಮತ್.ಕೆ.ಸಿ ಸೇರಿದಂತೆ ಹರಿಹರ ಪಲ್ಲತ್ತಡ್ಕ, ಬಾಳುಗೋಡು, ಕೊಲ್ಲಮೊಗ್ರು, ಐನೆಕಿದು ಗ್ರಾಮದವರು ಉಪಸ್ಥಿತರಿದ್ದರು.
- Tuesday
- December 3rd, 2024