ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಸರಕಾರದ ರೈತರ ಪರ ಎಂದು ಆಡಳಿತಕ್ಕೆ ಬಂದ ಬಳಿಕ ಯಾವುದೇ ಬೇಡಿಕೆಗಳನ್ನು ಈಡೇರಿಸದೆ, ರೈತರಿಗೆ ವಿರುದ್ಧವಾಗಿ ಆಡಳಿತ ನಡೆಸುವ ಮೂಲಕ ರೈತ ವಿರೋಧಿ ನೀತಿ ಅನುಸರಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಸುಳ್ಯ ಘಟಕ ಆರೋಪಿಸಿದ್ದಾರೆ.
ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ತಾಲೂಕು ಗೌರವಾಧ್ಯಕ್ಷ ನೂಜಾಲು ಪದ್ಮನಾಭ ಗೌಡ ಮಾತನಾಡುತ್ತಾ ನರೇಂದ್ರ ಮೋದಿ ಸರಕಾರ 2014ರಲ್ಲಿ ಆಡಳಿತಕ್ಕೆ ಬರುವ ವೇಳೆ ವಿವಿಧ ಭರವಸೆಗಳನ್ನು ನೀಡಿದ್ದರು. ಸ್ವಾಮಿನಾಥನ್ ಆಯೋಗದ ವರದಿ ಯಥಾವತ್ ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಳಿಕ ವರದಿಯನ್ವಯ ಕೃಷಿ ಉತ್ಪನ್ನಗಳಿಗೆ ಸಾಧ್ಯವಿಲ್ಲ ಎಂದು ಹೇಳಿ ರೈತರಿಗೆ ಮೋಸ ಮಾಡಿದೆ. ಎಪಿಎಂಸಿ ಕಾಯ್ದೆಗೆ ತಿದ್ದಪಡಿ ಮಾಡಿ ಬಂಡವಾಳ ಶಾಯಿಗಳಿಗೆ ಲಾಭ ಆಗುವಂತೆ ಮಾಡಿದರು. ಭೂ ಸುಧಾರಣಾ ಕಾನೂನು ಸೇರಿದಂತೆ ವಿವಿಧ ರೀತಿಯಲ್ಲಿ ರೈತರನ್ನು ಸಂಕಷ್ಟಕ್ಕೆ ತಳ್ಳುವ ಕೆಲಸವನ್ನು ಕೇಂದ್ರದ ಮೋದಿ ಸರಕಾರ ನಡೆಸಿದೆ ಎಂದು ಆರೋಪಿಸಿದರು. ರೈತ ಸಮುದಾಯಕ್ಕೆ ಇದೀಗ ಮೋದಿ ಸರಕಾರದ ಮೇಲೆ ವಿಶ್ವಾಸ ಹೋಗಿದೆ. ಸರಕಾರ ರೈತರನ್ನು ಗುಲಾಮರನ್ನಾಗಿಸಿದೆ. ಇಂತಹ ಸರಕಾರ ತೊಲಗಬೇಕು ಎಂಬುದು ರೈತರ ಹೋರಾಟ ಎಂದು ಅವರು ಬಿಜೆಪಿ ಹೊರತಾದ ಸರಕಾರ ಬರಬೇಕು ಇಲ್ಲವೇ ರೈತರಿಗೆ ಉಳಿಗಾಲವಿಲ್ಲ ಎಂದರು.
ಸೌಜನ್ಯ ಹೋರಾಟದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷರ ನೋಟಾ ಮತ ಚಲಾವಣೆಗೆ ಬೆಂಬಲ ನೀಡಿರುವುದು ಅವರ ವೈಯಕ್ತಿಕವಾದ ವಿಚಾರ. ಈ ಬಗ್ಗೆ ಚರ್ಚೆ ನಡೆದಿದ್ದು, ನಮ್ಮ ಸಂಘದಿಂದ ನೋಟಾಕ್ಕೆ ಬೆಂಬಲ ಇಲ್ಲ ಅಲ್ಲದೇ ಬಿಜೆಪಿಯನ್ನು ಶಕ್ತವಾಗಿ ಎದುರಿಸಬಲ್ಲ ಪಕ್ಷಕ್ಕೆ ಮತನೀಡುತ್ತೆವೆ ಎಂದು ಹೇಳಿದರು ಪತ್ರಿಕಾಗೋಷ್ಠಿಯಲ್ಲಿ ಸಂಘದ ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಮಡ್ತಿಲ, ಜಿಲ್ಲಾ ಉಪಾಧ್ಯಕ್ಷ ದಿವಾಕರ ಪೈ ಮಜಿಗುಂಡಿ, ತಾಲೂಕು ಉಪಾಧ್ಯಕ್ಷ ಸುಳ್ಯಕೋಡಿ ಮಾಧವ ಗೌಡ, ಸಂಪಾಜೆ ಗ್ರಾಮ ಸಮಿತಿ ಅಧ್ಯಕ್ಷ ವಸಂತ ಪೆಲ್ತಡ್ಕ ಉಪಸ್ಥಿತರಿದ್ದರು.