Ad Widget

ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ.

ಸುಳ್ಯದ ಬಿಜೆಪಿ ಮುಖಂಡರು, ಸುಳ್ಯ ಸಿ ಎ ಬ್ಯಾಂಕ್ ಉಪಾಧ್ಯಕ್ಷರು, ಜಾಲ್ಸೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಕರುಣಾಕರ ಅಡ್ಪಂಗಾಯ ಮತ್ತು ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮಹಿಳಾ ಮುಖಂಡರಾದ ಬೀನಾ ಕರುಣಾಕರರವರು ಇಂದು ಕುಕ್ಕೆ ಸುಬ್ರಮಣ್ಯದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ದ ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇವರು ಈ ಹಿಂದೆ ಸಿ ಎ ಬ್ಯಾಂಕ್ ಚುನಾವಣೆಯಲ್ಲಿ ಸಹಕಾರ ಭಾರತೀ ವಿರುದ್ದ ಬಂಡಾಯ ಸ್ಪರ್ಧಿಸಿ ಸೋಲು ಕಂಡಿದ್ದರು. ಸೇರ್ಪಡೆ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯರು ನೇತೃತ್ವ ವಹಿಸಿದ್ದರು. ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ ವೆಂಕಪ್ಪ ಗೌಡ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ,ಅಶೋಕ್ ನೆಕ್ರಾಜೆ ಶ್ರೀಮತಿ ಲೀಲಾ ಮನಮೋಹನ ಮೊದಲಾದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!