
ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಬೈಕ್ ಮೇಲೆ ಜೀಪು ಮಗುಚಿ ಬಿದ್ದು ಅಜ್ಜಾವರ ಮೂಲದ ದಂಪತಿಗಳು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸಲಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವಿನಾಯಕ ಮೂರ್ತಿ ಎಂಬುವವರು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು ಇವರ ಪತ್ನಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಮೃತಪಟ್ಟ ವ್ಯಕ್ತಿಯ ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಇರುವುದಾಗಿ ತಿಳಿದುಬಂದಿದೆ.