Ad Widget

ಚುನಾವಣೆ ಹಿನ್ನಲೆಯಲ್ಲಿ ಡೆಪಾಸಿಟ್ ಇರಿಸಿದ ಕೋವಿ ರೈತರಿಗೆ ಷರತ್ತಿನೊಂದಿಗೆ ನೀಡಲು ಆದೇಶ.

ಸುಳ್ಯ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಕೃಷಿಕರ ಉಪಯೋಗಕ್ಕೆ ನೀಡಿದ್ದ ಮತ್ತು ಆತ್ಮ ರಕ್ಷಣೆಗೆ ನೀಡಲಾದ ಗನ್ ಗಳನ್ನು ಡೆಪಾಸಿಟ್ ಇಡಲು ಆದೇಶಿಸಿದ್ದರು ಅಲ್ಲದೇ ಕೆಲವು ಕಡೆಗಳಲ್ಲಿ ಕಾಡು ಪ್ರಾಣಿಗಳ ಹಾವಳಿಯನ್ನು ಮನಗಂಡು ಜಿಲ್ಲಾಧಿಕಾರಿಗಳು ಇಂದು ಠೇವನಿ ಇರಿಸಲಾದ ಕೋವಿ ಮತ್ತು ಗನ್ ಗಳನ್ನು ಮರಳಿ ರೈತರಿಗೆ ನೀಡಲು ಷರತ್ತಿನೊಂದಿಗೆ ಆದೇಶಿಸಿದ್ದಾರೆ

ಆದೇಶದಲ್ಲಿ ಏನಿದೆ ಷರತ್ತುಗಳು ಏನು ಗೊತ್ತಾ .

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿರಕ್ಷಣೆಗಾಗಿ ಆಯುಧ ಪರವಾನಿಗೆಗಳನ್ನು ಹೊಂದಿರುವ (ಪೊಲೀಸ್ ಆಯುಕ್ತರ ಕಾರ್ಯ ವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಆಯುಧ ಪರವಾನಿಗೆದಾರರು ತಮ್ಮ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ ಅಥವಾ ಅಧೀಕೃತ ಕೋವಿ ಹಾಗೂ ಮದ್ದುಗುಂಡು ವ್ಯಾಪಾರಸ್ಥರಲ್ಲಿ ಠೇವಣಿ ಇರಿಸಿದ್ದು. ಸದ್ರಿ ಅಯುಧಗಳನ್ನು ಹಿಂಪಡೆಯಲು ಆಯುಧ ಪರವಾನಿಗೆದಾರರಿಗೆ ಅನುಮತಿಯನ್ನು ನೀಡಲಾಗಿದ್ದು, ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ / ಅಧೀಕೃತ ಕೋವಿ ಹಾಗೂ ಮದ್ದುಗುಂಡು ವ್ಯಾಪಾರಸ್ಥರು ಈ ಕೂಡಲೇ ಕೃಷಿರಕ್ಷಣೆಗಾಗಿ ಅಯುಧಗಳನ್ನು ಹೊಂದಿರುವ ಪರವಾನಿಗೆದಾರರ ಆಯುಧಗಳನ್ನು (ನಮೂನೆ – IV) ಹಿಂದಿರುಗಿಸಲು ಸೂಕ್ತ ಕ್ರಮ ಕೈಗೊಳ್ಳಲು ಆದೇಶಿಸಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಆಯುಧ ಪರವಾನಿಗೆ ಈ ಕೆಳಕಂಡ ಷರತ್ತುಗಳನ್ನು ತಪ್ಪದೇ ಪಾಲಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಿದ್ದು ಈ ಕೆಳಗಿನ ಷರತ್ತುಗಳನ್ನು ವಿಧಿಸಲಾಗಿದೆ

  1. ಯಾವುದೇ ಮೆರವಣಿಗೆ, ಜಾತ್ರೆ ಇತ್ಯಾದಿಗಳಲ್ಲಿ ಶಸ್ತ್ರಾಸ್ತ್ರವನ್ನು ಒಯ್ಯಲು ಅವಕಾಶವಿರುವುದಿಲ್ಲ.
  2. ಬೆಳೆಗಳ ರಕ್ಷಣೆಗಾಗಿ ಸದ್ರಿ ಅಯುಧಗಳನ್ನು ಮಾತ್ರ ಬಳಸತಕ್ಕದ್ದಾಗಿದೆ.
  3. ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಬಹಿರಂಗವಾಗಿ ಎಲ್ಲೂ ಪ್ರದರ್ಶಿಸುವಂತಿಲ್ಲ.
  4. ಸಾರ್ವಜನಿಕರನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆದರಿಸಲು ಶಸ್ತ್ರಾಸ್ತ್ರವನ್ನು ಬಳಸಬಾರದು.
  5. ಯಾವುದೇ ಸಂದರ್ಭದಲ್ಲಿ ಅವಶ್ಯವೆನಿಸಿದಲ್ಲಿ ಪೊಲೀಸ್ ಅಧಿಕಾರಿಗಳು/ ಸರಕಾರಿ ಅಧಿಕಾರಿಗಳಿಗೆ ತಪಾಸಣೆ ವೇಳೆ ಹಾಜರುಪಡಿಸತಕ್ಕದ್ದು ಮತ್ತು ತಪಾಸಣೆಗೆ ಸಹಕರಿಸಿ ಪೂರಕ ದಾಖಲೆಗಳನ್ನು ಒದಗಿಸತಕ್ಕದ್ದು.
  6. ಪರವಾನಿಗೆದಾರರು ಮೇಲಿನ ಶರ್ತಗಳನ್ನು ಉಲ್ಲಂಘನೆ ಮಾಡಿ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿರುವುದು ಕಂಡುಬಂದಲ್ಲಿ, ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಯಾವುದೇ ಮುನ್ಸೂಚನೆ ನೀಡದೆ ವಶಪಡಿಸಿಕೊಳ್ಳಲಾಗುವುದು.
  7. ಯಾವುದೇ ರೀತಿಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸತಕ್ಕದ್ದಲ್ಲ. ಉಲ್ಲಂಘನೆಯಾದಲ್ಲಿ ಆಯುಧ ಪರವಾನಿಗೆದಾರರ ಮೇಲೆ IPC Section 188 ರಂತೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!