- Sunday
- November 24th, 2024
ಬೊಳುಬೈಲು ಮತದಾನ ಕೇಂದ್ರದಲ್ಲಿ ಕರ್ತವ್ಯ ನಿರತ ಸಂಜೀವಿನಿ ಒಕ್ಕೂಟದ ಸದಸ್ಯೆ ಹಾಗೂ ಸ್ಥಳೀಯ ಗ್ರಾ.ಪಂ. ಸದಸ್ಯರೊರ್ವರ ಮಧ್ಯೆ ಪರಸ್ಪರ ಮಾತಿನ ಚಕಮಕಿ ನಡೆದು, ಸ್ಥಳಕ್ಕೆ ಪೊಲೀಸರು ಆಗಮಿಸಿ, ಸಂಜೀವಿನಿ ಒಕ್ಕೂಟದ ಮಹಿಳೆಯನ್ನು ಮತದಾನ ಕೇಂದ್ರದಿಂದ ಹೊರಗೆ ಕಳುಹಿಸಿದ ಘಟನೆ ನಡೆದಿದೆ. ಜಾಲ್ಸೂರು ಗ್ರಾಮ ಪಂಚಾಯತಿಯ ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವೇದಾ ಶೆಟ್ಟಿ...
ನಡುಗಲ್ಲು ಮತಗಟ್ಟೆ ಬಳಿ ಸುಮಾರು ನೂರಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಮತಯಾಚನೆ ಮಾಡಿದರು.
ಬೈಕು ಹಾಗೂ ಕಾರು ನಡುವೆ ಭೀಕರ ಅಪಘಾತ ನಡೆದು ಹಿಂಬದಿ ಬೈಕ್ ಸವಾರ ಮೃತಪಟ್ಟ ಘಟನೆ ಕಲ್ಲುಗುಂಡಿ ಸಮೀಪದ ದೊಡ್ಡಡ್ಕದಲ್ಲಿ ಕಳೆದ ರಾತ್ರಿ ನಡೆದಿದೆ.ಮತಹಾಕಲು ಬೆಂಗಳೂರಿನಿಂದ ಅರಂತೋಡಿಗೆ ಬರುತ್ತಿದ್ದ ಯುವಕ ಮೃತ ಪಟ್ಟಿರುವುದಾಗಿ ತಿಳಿದುಬಂದಿದೆ. ಬೈಕ್ ರೈಡ್ ಮಾಡುತ್ತಿದ್ದ ಯುವಕ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ.
ಸುಳ್ಯ ತಾಲೂಕು ದಂಡಾಧಿಕಾರಿಗಳಾದ ಜಿ ಮಂಜುನಾಥ್ ರವರಿಗೆ ಸಂಪಾಜೆ ಮೂಲದ ವ್ಯಕ್ತಿಯೋರ್ವರು ದೂರವಾಣಿ ಮೂಲಕ ಅವಾಚ್ಯಾ ಶಬ್ದಗಳಿಂದ ನಿಂದನೆ ಮಾಡಿ ಪೋಲಿಸ್ ಇಲಾಖೆಗೆ ದೂರು ನೀಡಿದ ಪ್ರಕರಣ ಠಾಣೆಯಲ್ಲೆ ಇತ್ಯರ್ಥವಾದ ಘಟನೆ ವರದಿಯಾಗಿದೆ. ಸಂಪಾಜೆ ಮೂಲದ ಧೀರಜ್ ಎಂಬುವ ವ್ಯಕ್ತಿಯವರು ತಮ್ಮ ಜಮೀನಿನ ಕುರಿತಾದ ವಿಚಾರದಲ್ಲಿ ದೂರವಾಣಿ ಕರೆ ಮಾಡಿದ್ದು, ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳು...
ಸುಳ್ಯ : ಅಡ್ಕಾರ್ ಬೂತ್ ಸಂಖ್ಯೆ ೧೮೫ ಕ್ಕೆ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗಳು ಭೇಟಿ ನೀಡಿ ಮತದಾರರನ್ನು ಮತ್ತು ಸಮಗ್ರವಾಗಿ ಚುನಾವಣೆ ನಡೆಯುತ್ತಿರುವ ಬಗ್ಗೆ ವೀಕ್ಷಣೆ ನಡೆಸಿದರು.
ಸುಳ್ಯ: ಪ್ರತಿ ಚುನಾವಣಾ ಬೂತ್ ಗಳಲ್ಲಿ ನವ ಶಕ್ತಿ ನಾರಿಯರು ಎಂಬ ಪರಿಕಲ್ಪನೆಯಡಿಯಲ್ಲಿ ಮತಚಲಾವಣೆ ಮಾಡಿದರು . ಶಾಸಕಿ ಕು.ಭಾಗೀರಥಿ ಮುರುಳ್ಯ ಮತ್ತು ತಂಡ. ಪುಸ್ಪಾ ಮೇದಪ್ಪ ಮತ್ತು ತಂಡ. ಸತ್ಯವತಿ ಬಸವನಪಾದೆ ಮತ್ತು ತಂಡ .
ಸುಳ್ಯ: ಇತಿಹಾಸ ಪ್ರಸಿದ್ಧ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಮುಹೂರ್ತ ಕೂಡಿ ಬಂದಿದ್ದು ಇಂದಿನಿಂದ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳು ಆರಂಭಗೊಳ್ಳಲಿವೆ. ಕಳೆದ ಎರಡೂವರೆ ತಿಂಗಳುಗಳಿಂದ ಊರ ಜನತೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕಾಗಿ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದು ಕೊನೆಗೂ ಆ ಧಾರ್ಮಿಕ ಕಾರ್ಯಕ್ರಮದ ಆರಂಭಿಕ ವಿಧಾನಗಳು ಇಂದಿನಿಂದ ಪ್ರಾರಂಭಗೊಳ್ಳಲಿದೆ. ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ...
ಗುತ್ತಿಗಾರು ಗ್ರಾಮದ ಮೊಗ್ರ ಬೂತ್ ನಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಅರ್ಧ ಗಂಟೆ ವಿಳಂಬವಾದ ಬಗ್ಗೆ ವರದಿಯಾಗಿದೆ. ಇದರಿಂದ ಮತದಾರರು ಕ್ಯೂನಲ್ಲಿ ನಿಂತು ಕಾಯುವಂತಾಗಿದೆ.
ಎಸ್‌ಎಸ್‌ಪಿಯುನ ದುರ್ಗಾಲಕ್ಷ್ಮಿಗೆ ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ 10 ಅಂಕ – 593 ಅಂಕ ಪಡೆದು ರಾಜ್ಯಕ್ಕೆ 5ನೇ ಸ್ಥಾನ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್ ಎಸ್‌ಪಿಯು ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದುರ್ಗಾಲಕ್ಷ್ಜಿ ಜಿ.ಸಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600ಕ್ಕೆ 593 ಅಂಕ ಪಡೆದು ರಾಜ್ಯಕ್ಕೆ 5 ಸ್ಥಾನ ಪಡೆದಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶ ಬಂದಾಗ ಈಕೆಗೆ 583 ಅಂಕ ಬಂದಿತ್ತು.ಕಡಿಮೆ ಅಂಕ ಕಂಡು ಹೌಹಾರಿದ ಪ್ರತಿಭಾವಂತ ವಿದ್ಯಾರ್ಥಿನಿಯು ಮರು...
ಕಲ್ಲುಗುಂಡಿ ದೊಡ್ಡಡ್ಕ ಎಂಬಲ್ಲಿ ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರಿಗೆ ಗಾಯಗಳಾದ ಘಟನೆ ಇದೀಗ ವರದಿಯಾಗಿದೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಹಿಂಬದಿಯ ಸವಾರನಿಗೆ ಗುರತರ ಗಾಯವಾಗಿರುವುದಾಗಿ ತಿಳಿದುಬಂದಿದ್ದು ಬೈಕ್ ಸವಾರರಿಬ್ಬರೂ ಅರಂತೋಡು ಮೂಲದವರೆಂದು ಹೇಳಲಾಗುತ್ತಿದ್ದು ಮಡಿಕೇರಿ ಮಾರ್ಗದಲ್ಲಿ ಬಂದ ಬೈಕ್ ಹಾಗೂ ವಿರುದ್ದ ದಿಕ್ಕಿನಲ್ಲಿ ಬಂದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು...
Loading posts...
All posts loaded
No more posts