Ad Widget

ಉಬರಡ್ಕ : ಸಹಕಾರಿ ಸಂಘದ ನೂತನ ಸಿರಿ ಸಹಕಾರ ಸೌಧ ಲೋಕಾರ್ಪಣೆ


ಉಬರಡ್ಕ ಮಿತ್ತೂರು ಪ್ರಾ.ಕೃ. ಪ.ಸ.ಸಂಘದ ನೂತನ ಕಟ್ಟಡ ಸಿರಿ ಸಹಕಾರ ಸೌಧ ಇಂದು ಲೋಕಾರ್ಪಣೆಗೊಂಡಿತು. ಶಾಸಕಿ ಭಾಗೀರಥಿ ಮುರುಳ್ಯ ಲೋಕಾರ್ಪಣೆಗೊಳಿಸಿದರು. ಗೋದಾಮು ಕಟ್ಟಡವನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ಭದ್ರತಾ ಕೊಠಡಿಯನ್ನು ಮಾಜಿ ಸಚಿವ ಎಸ್.ಅಂಗಾರ  ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ ವಹಿಸಿದ್ದರು. ಈ ಸಂದರ್ಭದಲ್ಲಿ  ಗ್ರಾ.ಪಂ.ಅಧ್ಯಕ್ಷೆ ಪೂರ್ಣಿಮಾ ಸೂಂತೋಡು, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿ ರಾವ್ , ದ.ಕ.ಜಿಲ್ಲಾ ಜೇನು ವ್ಯವಸಾಯ ಸೇವಾ ಸಹಕಾರ ಸಂಘದ ಚಂದ್ರಾ ಕೋಲ್ಚಾರ್, ಟಿಎಪಿಸಿಎಂಎಸ್ ಸುಳ್ಯ ಇದರ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್‌. ಮನ್ಮಥ, ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ   ರಮೇಶ್ ದೇಲಂಪಾಡಿ, ಮಿತ್ತೂರು ಉಳ್ಳಾಕುಲು ದೈವಸ್ಥಾನದ ಆಡಳಿತ ಮೊಕ್ತೇಸರರಾದ ವೆಂಕಟ್ರಮಣ ಕೆದಂಬಾಡಿ , ಶ್ರೀ ನರಸಿಂಹ ದೇವಸ್ಥಾನದ ಅಧ್ಯಕ್ಷ ರತ್ನಾಕರ ಗೌಡ ಬಳ್ಳಡ್ಕ ಹಾಗೂ ಸಂಘದ ನಿರ್ದೇಶಕರು, ಮಾಜಿ ಅಧ್ಯಕ್ಷರು, ನಿರ್ದೇಶಕರುಗಳು, ತಾಲೂಕಿನ ಸಹಕಾರಿ ಸಂಘಗಳ ಅಧ್ಯಕ್ಷರು, ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಉರುಂಡೆ ವರದಿ ವಾಚಿಸಿದರು. ಕು.ಅನಘಾ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷ ರಾಜೇಶ್ ಭಟ್ ನೆಕ್ಕಿಲ ಸ್ವಾಗತಿಸಿದರು. ಕು. ಬೇಬಿ ವಿದ್ಯಾ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!