
ಸುಳ್ಯದ ಎಪಿಎಂಸಿ ಎದುರು ಭಾಗದಲ್ಲಿ ಪೈಪ್ ಲೈನ್ ಕಾಮಗಾರಿ ನಡೆದ ಜಾಗದಲ್ಲಿ ಲಾರಿಯೊಂದು ಹೂತು ಹೋದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬಳಿಕ ಕ್ರೇನ್ ಬಳಸಿ ಲಾರಿಯನ್ನು ಮೇಲಕ್ಕೆ ಎತ್ತಲಾಯಿತು. ಇನ್ನೂ ಮಳೆ ಆರಂಭವಾದಾಗ ಕೆಲವೆಡೆ ಅವೈಜ್ಞಾನಿಕ ಕಾಮಗಾರಿಯಿಂದ ಘನ ವಾಹನ ಚಾಲಕ ಸಂಕಷ್ಟ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸುವುದು ಒಳಿತು.