ಹೊಟ್ಟೆನೋವಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿರುದರಿಂದ, ಪೋಷಕರು ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.
ಕೊಡಿಯಾಲ ಗ್ರಾಮದ ಪೋನಡ್ಕ ಮನೆ ತಿಮ್ಮಪ್ಪ ಎಂಬವರ ಪುತ್ರ ನಿತಿನ್ ಕುಮಾರ್ (19) ಎಂಬ ಯುವಕ ಹೊಟ್ಟೆನೋವಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೇ.8 ರಂದು ಮೃತಪಟ್ಟಿದ್ದಾರೆ.
ಈ ಬಗ್ಗೆ ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳ ನಿರ್ಲಕ್ಷತೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದ ಪರಿಣಾಮ ಯುವಕ ಮೃತಪಟ್ಟಿರುವುದಾಗಿ ಯುವಕನ ತಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕಳೆದ 4-5 ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಂಡ ಇವರು ಕಾಣಿಯೂರು ಅಶ್ವಿನಿ ಕ್ಲಿನಿಕ್ ಗೆ ಹೋಗಿದ್ದು ಅಲ್ಲಿ ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್ ಮಾಡಲು ಹೇಳಿದ್ದರು. ಬಳಿಕ ಇವರು ಪುತ್ತೂರಲ್ಲಿ ಸ್ಕ್ಯಾನಿಂಗ್ ಮಾಡಿಸಿದಾಗ ಸಣ್ಣ ಗಾತ್ರದ ಕಿಡ್ನಿ ಸ್ಟೋನ್ ಇರುವುದಾಗಿ ತಿಳಿಸಿದ್ದು ನಂತರ ಮನೆಗೆ ಬಂದಿದ್ದರು. ಅದೇ ದಿನ ರಾತ್ರಿ ಹೊಟ್ಟೆನೋವು ಉಲ್ಬಣಿಸಿದ ಪರಿಣಾಮ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ವಾಪಾಸು ಮನೆಗೆ ಬಂದಿದ್ದರು. ಮದ್ಯಾಹ್ನ ಹೊಟ್ಟೆನೋವು ಪುನ: ಜೋರಾದಾಗ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿದ್ದು ಬಳಿಕ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.ಅಲ್ಲಿ ಪರೀಕ್ಷಿಸಿದ ವೈದ್ಯರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚಿಸಿದ ಮೇರೆಗೆ ಆಂಬ್ಯುಲೆನ್ಸ್ ನಲ್ಲಿ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಯುವಕ ಮೃತಪಟ್ಟಿರುವುದಾಗಿ ತಿಳಿಸಿದರೆನ್ನಲಾಗಿದೆ.
- Thursday
- November 21st, 2024