
ಬಿಜೆಪಿಯ ಯುವ ಮೋರ್ಚಾ ಮುಖಂಡರಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.2022 ರಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದು, ಹಲವಾರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಇದೀಗ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಅನ್ನು ಹಾಸನದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.