ಸುಳ್ಯದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರಿನಲ್ಲಿ ವರದಿಯಾಗಿದೆ. ಮೃತರನ್ನು ನೆಟ್ಟಾರು ನಿವಾಸಿ ಚರಣ್ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ವಿದ್ಯಾರ್ಥಿಯು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
- Thursday
- November 21st, 2024