Ad Widget

ಸುಳ್ಯ ಬ್ಲಾಕ್ ಕಾಂಗ್ರೆಸ್ : ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಪುಣ್ಯ ದಿನಾಚರಣೆ



ಮಾಜಿ ಪ್ರಧಾನಿ ಭಾರತ ರತ್ನ, ದಿ. ರಾಜೀವ್ ಗಾಂಧಿಯವರ ಪುಣ್ಯಸ್ಮರಣೆ ದಿನಾಚರಣೆ ಕಾರ್ಯಕ್ರಮ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.  ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ಯವರು ದಿವಂಗತ ರಾಜೀವ್ ಗಾಂಧಿಯವರ  ತ್ಯಾಗ ಬಲಿದಾನ ಮತ್ತು ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆಗಳ ಬಗ್ಗೆ ಸ್ಮರಿಸಿ ನುಡಿನಮನ ಸಲ್ಲಿಸಿದರು. ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕ ಉಪಾಧ್ಯಕ್ಷ ಕೆ ಎಂ ಮುಸ್ತಫಾ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಿಸಿಸಿ ಸದಸ್ಯ ನಂದರಾಜ್ ಸಂಕೇಶ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ಅಂಬೇಕಲ್ಲು, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಗೋಕುಲ್ ದಾಸ್, ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾದ ರಾಜು ಪಂಡಿತ್, ಸಿದ್ದಿಕ್ ಕೊಕ್ಕೊ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಸದಸ್ಯ ರಂಜಿತ್ ರೈ ಮೇನಾಲ, ಜತ್ತಪ್ಪ ರೈ, ಜಿಲ್ಲಾ ಕಾಂಗ್ರೆಸ್ ಅಲ್ಫ ಸಂಖ್ಯಾತ ಘಟಕ ಕಾರ್ಯದರ್ಶಿ ಶಹೀದ್ ಪಾರೆ, ನಾಗ್ ಕುಮಾರ್ ಶೆಟ್ಟಿ ಮರ್ಕಂಜ, ಜಮಾಲ್ ಪಂಜ, ಕೇಶವ ಮೊರಂಗಲ್ಲು, ಮಹೇಶ್ ಬೆಳ್ಳರ್ಕರ್, ಶಿವರಾಮ್ ನರ್ಕೋಡು,ಭಾಗೀಶ್ ಕೆ ಟಿ ಗಂಗಾಧರ ಮೇನಾಲ ಉಪಸ್ಥಿತರಿದ್ದರು. ಜಿಲ್ಲಾ ಎಸ್ ಟಿ ಸೆಲ್ ಉಪಾಧ್ಯಕ್ಷ ಭವಾನಿಶಂಕರ್ ಕಲ್ಮಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ ಜೆ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading