
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ದ.ಕ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕೆ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಆನಂದಾಶ್ರಮ ಸೇವಾ ಟ್ರಸ್ಟ್(ರಿ.) ಪುತ್ತೂರು ಇವರ ಸಹಭಾಗಿತ್ವದಲ್ಲಿ ಮೇ.21 ರಂದು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ಚಿಕಿತ್ಸಾ ಶಿಬಿರ ನಡೆಯಿತು.
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ| ತ್ರಿಮೂರ್ತಿ ಹಾಗೂ ವೆನ್ಲಾಕ್ ಆಸ್ಪತ್ರೆಯ ವೈದ್ಯರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಸದಸ್ಯರು, ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಲಯನ್ಸ್ ಕ್ಲಬ್ ಕಾರ್ಯದರ್ಶಿ ಲ| ಸತೀಶ್ ಕೂಜುಗೋಡು ಸ್ವಾಗತಿಸಿ ಖಜಾಂಜಿ ಲ| ಚಂದ್ರಶೇಖರ ಪಾನತ್ತಿಲ ಧನ್ಯವಾದ ಸಮರ್ಪಿಸಿದರು.
ಸುಮಾರು 77 ಮಂದಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.(ವರದಿ : ಉಲ್ಲಾಸ್ ಕಜ್ಜೋಡಿ)
