
ಸಂಪಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಕ್ರಮಗಳಿಗೆ 2 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಯವರಿಗೆ ಮನವಿ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಕ್ರಮಕ್ಕೆ 2 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರನ್ನು ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಭೇಟಿಯಾಗಿ ಮನವಿ ಮಾಡಲಾಯಿತು ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು, ಉಪಾಧ್ಯಕ್ಷರಾದ ಎಸ್. ಕೆ. ಹನೀಫ್ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಶ್ರೀಮತಿ ಸುಂದರಿ ಮುಂಡಡ್ಕ, ಶ್ರೀಮತಿ ವಿಮಲಾಪ್ರಸಾದ್, ಸುಳ್ಯ ನಗರ ಪಂಚಾಯತ್ ಸದಸ್ಯರುಗಳಾದ ಶರೀಫ್ ಕಂಠಿ, ಸಿದ್ದಿಕ್ ಕೊಕ್ಕೋ, ಸಲೀಂ ಪೆರುಂಗೋಡಿ, ಜೆ. ಬಿ. ಹನೀಫ್, ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಮೊದಲಾದವರು ಉಪಸ್ಥಿತರಿದ್ದರು.
