Ad Widget

ಉದ್ಯೋಗಾಕಾಂಕ್ಷಿಗಳಿಗೊಂದು  ಸುವರ್ಣಾವಕಾಶ – ಮೂಡಬಿದಿರೆಯಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ “ಆಳ್ವಾಸ್ ಪ್ರಗತಿ -2024”




ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 14 ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ “ಆಳ್ವಾಸ್ ಪ್ರಗತಿ 2024” ಜೂನ್ 7 ಮತ್ತು 8 ರಂದು ನಡೆಯಲಿದೆ ಎಂದು  ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹೇಳಿದರು.

ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉದ್ಯೋಗ ಮೇಳದ ವಿವರ ನೀಡಿದರು. ಆಳ್ವಾಸ್ ಪ್ರಗತಿ’ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 2007ರಿಂದ ನಡೆಸಿಕೊಂಡು ಬರುತ್ತಿರುವ ಬೃಹತ್ ಉದ್ಯೋಗ ಮೇಳವಾಗಿದ್ದು, ಸಂಸ್ಥೆಯ ಸಿಎಸ್‌ಆ‌ರ್ ಚಟುವಟಿಕೆಯ ಭಾಗವಾಗಿ ಗ್ರಾಮೀಣ ಭಾಗದ ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳಿಗೆ ಉಚಿತವಾಗಿ ವಿಶೇಷ ಔದ್ಯೋಗಿಕ ನೆರವು ನೀಡುವ ಉದ್ದೇಶವನ್ನು ವ್ಯವಸ್ಥಿತವಾಗಿ ಪೂರೈಸುತ್ತಾ ಬಂದಿದೆ.

ಸಂಸ್ಥೆಯು ಈವರೆಗೆ 20 ಬೃಹತ್ ಉದ್ಯೋಗ ಮೇಳಗಳನ್ನು ಬಹಳ ವ್ಯವಸ್ಥಿತವಾಗಿ ನಡೆಸಿಕೊಂಡು ಬಂದಿದೆ. ಸರ್ಕಾರ ಮತ್ತು ಸಾಮಾಜಿಕ ಸಂಸ್ಥೆಗಳ ಸಹಯೋಗದೊಂದಿಗೆ ಚಿಕ್ಕಬಳ್ಳಾಪುರ, ಮಂಗಳೂರು, ಬೆಳ್ತಂಗಡಿ ಮತ್ತು ಬಂಟ್ವಾಳ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಇದಕ್ಕಾಗಿ ಈವರೆಗೆ ಸುಮಾರು 5 ಕೋಟಿಗಳಷ್ಟು ಹಣವನ್ನು ವ್ಯಯಿಸಿದೆ. ಕರ್ನಾಟಕವು ಸೇರಿದಂತೆ ಕೇರಳ, ತಮಿಳುನಾಡು ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಅಭ್ಯರ್ಥಿಗಳು ಈ ಉದ್ಯೋಗ ಮೇಳದ ಹೆಚ್ಚಿನ ಲಾಭ ಪಡೆದಿದ್ದಾರೆ. ಒಟ್ಟು 1,60,000 ಆಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರೆ. 55,564 ಅಭ್ಯರ್ಥಿಗಳು ವಿವಿಧ ಕಂಪೆನಿಗಳಿಗೆ ಶಾರ್ಟ್ ಲೀಸ್ಟ್ ಗೊಂಡಿದ್ದಾರೆ. ಪ್ರತೀ ಉದ್ಯೋಗ ಮೇಳದಲ್ಲಿ ಸುಮಾರು 200ರಷ್ಟು ಪ್ರತಿಷ್ಠಿತ ಕಂಪನಿಗಳು ಪಾಲ್ಗೊಂಡು, ಇಲ್ಲಿವರೆಗೆ ಒಟ್ಟು 31,896 ಉದ್ಯೋಗಗಳನ್ನು ನೀಡಿವೆ. ಆಳ್ವಾಸ್ ಪ್ರಗತಿಯಲ್ಲಿ ನಿರುದ್ಯೋಗ ಪರಿಹರಿಸುವ ಪ್ರಭಾವಶಾಲಿ ಪ್ರಯತ್ನವನ್ನು ಫ್ರಾನ್ಸ್ ಟಿವಿ ಸೇರಿದಂತೆ ವಿವಿಧ ಮಾಧ್ಯಮಗಳು ಗಮನ ಸೆಳೆದಿವೆ.


ಆಳ್ವಾಸ್ ಶಿಕ್ಷಣ ಪತಿಷ್ಠಾನದವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಮೇಳ ಈ ಬಾರಿ 14ನೇ ಆವೃತ್ತಿಯದ್ದಾಗಿದ್ದು, ಜೂನ್ 7 ಹಾಗೂ 8ರಂದು ಇಲ್ಲಿನ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ನಡೆಯಲಿದೆ. ಬ್ಯಾಂಕಿಂಗ್ ಮತ್ತು ಹಣಕಾಸು, ಐಟಿ, ಐಟಿಎಸ್, ಮ್ಯಾನುಫ್ಯಾಕ್ಟರಿಂಗ್, ಹೆಲ್ತ್ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಹಾಸ್ಪಿಟಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಸಲಿವೆ. ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ
ಮ್ಯಾನೇಜ್ ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಎಸ್‌ಎಸ್‌ಎಲ್‌ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಕಂಪೆನಿಗಳ ವಿವರ ಹಾಗೂ ನವೀಕೃತ ಮಾಹಿತಿಗಳನ್ನು ಅಧಿಕೃತ ವೆಬ್‌ ಸೈಟ್ www.alvaspragati.com ನಲ್ಲಿ ಪ್ರಕಟಿಸಲಾಗಿದೆ. ಆಳ್ವಾಸ್ ಪ್ರಗತಿಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳು ಈ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಉಚಿತ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅಲ್ಲದೇ ಆಳ್ವಾಸ್‌ ಸಂಸ್ಥೆಯ ಪರಿಣತ ತಂಡದಿಂದ ‘ಆಳ್ವಾಸ್ ಪ್ರಗತಿ’ಯಲ್ಲಿ ಉದ್ಯೋಗ ನೀಡುವ ಕಂಪೆನಿಗಳ ಮಾಹಿತಿ, ಸಂದರ್ಶನಾ ಕೌಶಲ್ಯಗಳ ತರಬೇತಿಯನ್ನು ವಿವಿಧ ಕಡೆಗಳಲ್ಲಿ ನೀಡಲಾಗುವುದು.

200ಕ್ಕೂ ಅಧಿಕ ಕಂಪೆನಿಗಳು ಈ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇರುವುದರಿಂದ ವಿವಿಧ ಕಾಲೇಜುಗಳ ಪ್ರಾಂಶುಪಾಲರಿಗೆ ಮುಂಚಿತವಾಗಿ ತಿಳಿಸಿ, ಅಲ್ಲಿನ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉತ್ತೇಜಿಸಲಾಗುತ್ತಿದೆ ಎಂದರು.

ಹೊರ ಜಿಲ್ಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಜೂನ್ 6ರಿಂದ ವಸತಿ ವ್ಯವಸ್ಥೆ ಹಾಗೂ ಐಟಿಐ, ಡಿಪ್ಲೋಮಾ ಹಿನ್ನಲೆಯವರಿಗೆ ಆಳ್ವಾಸ್‌ನಿಂದ ಬಸ್ಸಿನ ವ್ಯವಸ್ಥೆ ಒದಗಿಸಲಾಗುವುದು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9008907716, 9663190590, 7975223865, 9741440490 ನಂಬರ್ ಗೆ ಕರೆ ಮಾಡಬಹುದು. www.alvaspragathi.com ವೆಬ್ಸೈಟ್ ನಲ್ಲಿ ಅಭ್ಯರ್ಥಿಗಳ ನೋಂದಾವಣೆ ಮತ್ತು ಉದ್ಯೋಗ ನೀಡಲಿರುವ ಕಂಪೆನಿಗಳ ಬಗ್ಗೆ ಮಾಹಿತಿ ದೊರೆಯಲಿದೆ.

ಅಭ್ಯರ್ಥಿಗಳು ಲಗತ್ತಿಸಬೇಕಾದ ಅಗತ್ಯ ದಾಖಲಾತಿಗಳು- 5-10 ಪಾಸ್‌ಪೋರ್ಟ್ ಭಾವಚಿತ್ರಗಳು, ಸಂಪೂರ್ಣ ಶೈಕ್ಷಣಿಕ ಮಾಹಿತಿಗಳನ್ನೊಳಗೊಂಡ ರೆಸ್ಯೂಮ್, ಅಂಕ ಪಟ್ಟಿಗಳು (ನೆರಳಚ್ಚು ಪ್ರತಿಗಳು) ,  ಆನ್‌ಲೈನ್‌ ರಿಜಿಸ್ಟ್ರೇಶನ್ ನಂಬರ್/ಐಡಿ, ಅಭ್ಯರ್ಥಿಗಳು ಉದ್ಯೋಗ ಮೇಳದಂದು ಬೆಳಿಗ್ಗೆ 8 ಗಂಟೆಗೆ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಹಾಜರಿರಬೇಕು ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಆಳ್ವಾಸ್ ಪ್ರಗತಿ 2024 ರ ಉತ್ಪಾದನ ವಲಯ ಮುಖ್ಯಸ್ಥ ಶ್ರೀನಿವಾಸ, ಆಳ್ವಾಸ್ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ರವಿ ಶೆಣೈ ಉಪಸ್ಥಿತರಿದ್ದರು.

. . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!