ಸುಳ್ಯ: ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಈ ಬಾರಿ ಗೆಲುವಿನ ವಿಶ್ವಾಸ ಇದೆ ಎಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್ ಹಾಗೂ ಡಾ.ಕೆ.ಕೆ.ಮಂಜುನಾಥ್ ಹೇಳಿದ್ದಾರೆ. ಅವರು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಮಾತನಾಡಿ 42 ವರ್ಷದಿಂದ ಬಿಜೆಪಿ ಕೈಯಲ್ಲಿದ್ದ ಕ್ಷೇತ್ರದಲ್ಲಿ ಈ ಬಾರಿ ಬದಲಾವಣೆಯ ಸಾಧ್ಯತೆ ಇದ್ದು ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಇದೆ. ಶಿಕ್ಷಕರ ಹಾಗೂ ವಿದ್ಯಾವಂತ ಸಮೂಹಕ್ಕೆ ಹಲವು ಸಮಸ್ಯೆಗಳು ಇದೆ. ಆಡಳಿತ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಈ ಸಮಸ್ಯೆಗಳನ್ನು ಪರಿಹರಿಸುತ್ತೇವೆ. ಹೊಸ ಪಿಂಚಣಿ ಯೋಜನೆಯನ್ನು ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಜಾರಿ ಮಾಡುವುದು ಸೇರಿದಂತೆ ಹಲವು ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ ಇದನ್ನು ಈಡೇರಿಸುತ್ತೇವೆ ಎಂದರು.
ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ ‘ಶಿಕ್ಷಕ ಸಮುದಾಯದ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ
ಈ ಬಾರಿ ಶಿಕ್ಷಕರ ಕ್ಷೇತ್ರದಿಂದ ಶಿಕ್ಷಕನನ್ನೇ ಆಯ್ಕೆ ಮಾಡಬೇಕು ಎಂದು ವಿನಂತಿಸಿದರು. ಶೈಕ್ಷಣಿಕವಾಗಿ ಮತ್ತು ಸಂಘಟನಾತ್ಮಕವಾಗಿ ಅನುಭವ ಹೊಂದಿರುವ ತನ್ನನ್ನು ಗೆಲ್ಲಿಸಿದರೆ ಶಿಕ್ಷಕ ಸಮುದಾಯದ ಸಮಸ್ಯೆಗಳನ್ನು ಸಮರ್ಥವಾಗಿ ಮಂಡಿಸಿ ಪರಿಹರಿಸುವ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮುಸ್ತಫ, ವಿಧಾನ ಪರಿಷತ್ ಉಸ್ತುವಾರಿ ಪ್ರದೀಪ್‌ಕುಮಾರ್ ರೈ ಪಾಂಬಾರು,ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಮುಖಂಡರಾದ ಎಂ.ವೆಂಕಪ್ಪ ಗೌಡ, ಶರೀಫ್ ಕಂಠಿ, ಮೂಸಾ ಕುಂಞಿ ಪೈಂಬೆಚ್ಚಾಲ್ ಮತ್ತಿತರರು ಉಪಸ್ಥಿತರಿದ್ದರು.
- Friday
- November 1st, 2024