- Saturday
- November 23rd, 2024
ಚಾಲಕನ ನಿಯಂತ್ರಣ ತಪ್ಪಿ ಜೀಪೊಂದು ಚರಂಡಿಗೆ ಬಿದ್ದ ಘಟನೆ ಮೇ.14 ರಂದು ರಾತ್ರಿ ಬೆಳ್ಳಾರೆ ಸಮೀಪ ನೆಟ್ಟಾರಿನಲ್ಲಿ ನಡೆದಿದೆ.ಬೆಳ್ಳಾರೆ ಕಡೆಯಿಂದ ಮಾಡಾವು ಕಡೆಗೆ ಹೋಗುತ್ತಿದ್ದ ಥಾರ್ ಜೀಪು ನಿಯಂತ್ರಣ ತಪ್ಪಿ ರಸ್ತೆ ಬದಿಯ ದೊಡ್ಡ ಚರಂಡಿಗೆ ಉರುಳಿ ಬಿದ್ದಿದೆ. ಪರಿಣಾಮ ಜೀಪಿನ ಎದುರುಭಾಗ ಸಂಪೂರ್ಣ ಜಖಂಗೊಂಡಿದೆ. ಚಾಲಕ ವಿನೋದ್ ಪಾಲ್ತಾಡುರವರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ.
ಸುಬ್ರಹ್ಮಣ್ಯ ಮೇ14.: ಸುಬ್ರಹ್ಮಣ್ಯದ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಖಡ 92 ಅಂಕಗಳಿಸಿದ ಬಡ ತನದಲ್ಲಿರುವ ವಿದ್ಯಾರ್ಥಿ ಅಕ್ಷಯ ನಂಬಿಯಾರಿಗೆ ಮುಂದಿನ ಪಿಯುಸಿ ವಿದ್ಯಾಭ್ಯಾಸಕ್ಕಾಗಿ ಸಹಾಯಧನವನ್ನ ಮಂಗಳವಾರ ನೀಡಲಾಯಿತು. ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾl ತಿಲಕ್ ಎ.ಎ. ಸಹಾಯಧನವನ್ನ ನೀಡಿದರು. ಈ...
ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ಜಿಶಾ ಕೊರಂಬಡ್ಕ, ಉಪವಿಷ್ಟ ಕೋನಾಸನ ದಲ್ಲಿ 02 ಗಂಟೆ 6 ನಿಮಿಷ 50 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.ಇವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ವಾಲ್ತಾಜೆ ಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು...
ಮಡಿಕೇರಿ ಕಡೆಯಿಂದ ಬರುತ್ತಿದ್ದ ಕಾರು ಮತ್ತು ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಘಟನೆ ಸಂಪಾಜೆಯ ಅರೆಕಲ್ಲು ರೋಡಿನ ತಿರುವಿನಲ್ಲಿ ನಡೆದಿದೆ. ಕಾರು ಮಡಿಕೇರಿ ಕಡೆಯಿಂದ ಬರುತ್ತಿದ್ದು, ಕಾರಿನೊಳಗಿದ್ದ ಮಗುವಿಗೆ ಅಲ್ಪ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಹೋಟೆಲ್ ವೊಂದರಲ್ಲಿ ಕೆಲಸಕ್ಕಿದ್ದ ವ್ಯಕ್ತಿಯೊಬ್ಬ ರಾತ್ರಿ ಮಲಗಿದಲ್ಲೇ ಸಾವಿಗೀಡಾಗಿರುವ ಘಟನೆ ಮೇ.14ರಂದು ವರದಿಯಾಗಿದೆ.ಸಾವಿಗೀಡಾಗಿರುವ ವ್ಯಕ್ತಿ ವಿಶ್ವನಾಥ ಎಂದು ಗುರುತಿಸಲಾಗಿದೆ. ರಾತ್ರಿ ಊಟ ಮಾಡಿ ಮಲಗಿದ್ದ ಇವರು ಬೆಳಗ್ಗಿನ ಜಾವ ನೋಡಿದಾಗ ಮೃತಪಟ್ಟ ರೀತಿ ಕಂಡು ಬಂದಿದ್ದು, ಇವರಿಗೆ ಹೃದಯಾಘಾತ ಆಗಿರಬಹುದು ಎಂದು ಸಂಶಯ ವ್ಯಕ್ತ ಪಡಿಸಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ...
ಅದೊಂದು ದಿನ ರಾತ್ರಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಜೋರಾಗಿ ಮಳೆ ಸುರಿಯುತ್ತಿತ್ತು. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಮೇಶ್ ಎರಡು ದಿವಸಗಳ ಕಾಲ ಆಫೀಸ್ ಗೆ ರಜೆ ಹಾಕಿ ನಾಳೆ ತನ್ನೂರಿಗೆ ಹೊರಡಲು ಸಿದ್ಧನಾಗಿದ್ದ. ಆದರೆ ಊರಿಗೆ ಹೋಗುವ ಮೊದಲು ಬಾಕಿ ಇರುವ ತನ್ನ ಆಫೀಸ್ ಕೆಲಸಗಳನ್ನು ಇಂದೇ ಮಾಡಿ ಮುಗಿಸಬೇಕೆಂದು ಆತ ಕಂಪ್ಯೂಟರ್ ಎದುರು ಕುಳಿತ.ರಾತ್ರಿ...
ಬೆಳ್ಳಾರೆಯ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನ10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 53 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗುವ ಮೂಲಕ ಶೇ 100% ಪಲಿತಾಂಶ ದಾಖಲಾಗಿದೆ. ಈ ಪೈಕಿ 28 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಅಂಕ ಪಡೆದಿದ್ದಾರೆ. ಶಾರ್ವರಿ ಆರ್.ಎಸ್. ಶೇ.95.8 ಅಂಕಗಳೊಂದಿಗೆ ತರಗತಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಧನುಷ್ ರಾಮ್...
ಪುರೋಹಿತ ನಾಗರಾಜ ಭಟ್ಸುಳ್ಯ ಹಳೆಗೇಟು ವಿದ್ಯಾನಗರ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ಸುಳ್ಯ ರಿ. ಇದರ ಆಶ್ರಯದಲ್ಲಿ ನಡೆದ ಶ್ರೀ ಕೇಶವ ಕೃಪಾ ವೇದ ಯೋಗ ಕಲಾ ಶಿಬಿರ 2024ರ ಸಮಾರೋಪ ಸಮಾರಂಭ ಹಾಗೂ ಶ್ರೀ ಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ 19ರಂದು ವಿದ್ಯಾನಗರದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ...
ಸುಳ್ಯದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರಿನಲ್ಲಿ ವರದಿಯಾಗಿದೆ. ಮೃತರನ್ನು ನೆಟ್ಟಾರು ನಿವಾಸಿ ಚರಣ್ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ವಿದ್ಯಾರ್ಥಿಯು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ...
Loading posts...
All posts loaded
No more posts