

ಬಾಳಿಲದ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಕೃಷ್ಣಮೂರ್ತಿಯವರ ವಯೋ ನಿವೃತ್ತಿಯಿಂದ ತೆರವಾದ ಸ್ಥಾನದ ಪ್ರಭಾರವನ್ನು, ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶನ ಹಾಗೂ ಆಡಳಿತ ಮಂಡಳಿಯ ಸೂಚನೆಯಂತೆ ವಿದ್ಯಾಬೋಧಿನೀ ಪ್ರೌಢಶಾಲೆಯ ಸಹಶಿಕ್ಷಕರಾದ ಉದಯಕುಮಾರ ರೈ ಎಸ್ ರವರು ವಹಿಸಿಕೊಂಡರು.
ಈ ಸಂದರ್ಭ ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕ ಪಿ ಜಿ ಎಸ್ ಎನ್ ಪ್ರಸಾದ್, ವಿದ್ಯಾಬೋಧಿನೀ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ರಾಧಾಕೃಷ್ಣ ರಾವ್ ಯು, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಯಶೋಧರ ಎನ್, ಎಸ್ ಡಿ ಎಂ ಸಿ ಅಧ್ಯಕ್ಷ ರುತ್ಮಯ್ಯ ಹಾಗೂ ಗೌರವ ಶಿಕ್ಷಕರಾದ ಯಶೋದಾ ಎನ್ ಕೆ, ಶಿವಪ್ರಸಾದ್ ಜಿ, ಶುಭಾ ಡಿ ಹಾಗೂ ರಮ್ಯಶ್ರೀ ಉಪಸ್ಥಿತರಿದ್ದರು.