
ಮೈಸೂರು: ವಿಧಾನ ಪರಿಷತ್ ನ ನೈರುತ್ಯ ಪದವೀದರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ್ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತನ್ನ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರನ್ನು 24,111 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ. ಸರ್ಜಿ 37,627 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13,516 ಮತ ಪಡೆದರು. ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ರಘುಪತಿ ಭಟ್ 7039 ಮತ ಗಳಿಸಿದರು. 66,497 ಸಾವಿರ ಮತಗಳ ಎಣಿಕೆ ಮಾಡಿದ್ದು. 5115 ಮತಗಳು ತಿರಸ್ಕೃತಗೊಂಡವು.