
ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಸುಮಾರು 13 ವರ್ಷಗಳ ಕಾಲ ಗ್ರಂಥಾಲಯ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕಂದಾಯ ಇಲಾಖೆಯಲ್ಲಿ ಗ್ರಾಮ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಧಾಕೃಷ್ಣರವರನ್ನು ಜೂ.01 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ಸಂಘ ಸುಳ್ಯ ಶಾಖೆಯ 2024-25ನೇ ಸಾಲಿನ ಪ್ರಥಮ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ತಾಲೂಕು ಸಂಘದ ಅಧ್ಯಕ್ಷರಾದ ಶ್ರೀಮತಿ ಅಭಿಲಾಷಾ ಮೋಟ್ನೂರು ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸನ್ಮಾನ ಸ್ವೀಕರಿಸಿದ ರಾಧಾಕೃಷ್ಣರವರು ವಿನೂತನ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು.
ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀಮತಿ ಸಾವಿತ್ರಿ ಕಣೇಮರಡ್ಕ ಮತ್ತು ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರು ಕನಿಷ್ಠ ವೇತನದ ಆದೇಶ ಬಂದು 10 ತಿಂಗಳಾದರೂ ಇನ್ನೂ ಕೈ ಸೇರದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಕಾರ್ಯದರ್ಶಿ ಸಂತೋಷ್ ಮುಂಡಕಜೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಶಿಕಲಾ ಧನ್ಯವಾದ ಸಮರ್ಪಿಸಿದರು.