Ad Widget

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ ನಾಯಕನಾಗಿ ಗಗನ್ – ಮತ ಯಂತ್ರದ ಮೂಲಕ ನಡೆದ ಚುನಾವಣೆ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ
2024 25 ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲದ ರಚನೆಗಾಗಿ ಚುನಾವಣೆ ನಡೆಯಿತು. ವಿದ್ಯಾರ್ಥಿಗಳು ಇವಿಎಂ ಮೂಲಕ ತಮ್ಮ ಮತವನ್ನು ಚಲಾಯಿಸಿದರು. ಆರನೇ ತರಗತಿಯಿಂದ ಹತ್ತನೇ ತರಗತಿವರೆಗೆ ವಿದ್ಯಾರ್ಥಿಗಳು ಮತವನ್ನು ಹಾಕಲು ಅರ್ಹತೆಯನ್ನು ಪಡೆದಿದ್ದರು. ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಚುನಾವಣೆ ಪ್ರಕ್ರಿಯೆ ಹೇಗೆ ನಡೆಯುತ್ತಿದೆ ಎಂಬುದನ್ನು ತಿಳಿಸಿಕೊಡಲು ಈ ವಿಧಾನವನ್ನು ಶಾಲೆಯಲ್ಲಿ ಅಳವಡಿಸಿಕೊಂಡಿದ್ದರು. ಮುಖ್ಯಮಂತ್ರಿ ಹುದ್ದೆಗೆ ಐದು ವಿದ್ಯಾರ್ಥಿಗಳು ಸ್ಪರ್ಧಿಸಿದ್ದು ಅದರಲ್ಲಿ ಗಗನ್ 10ನೇ ತರಗತಿ ಅತಿ ಹೆಚ್ಚು ಮತಗಳಿಸಿ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿದ್ದಾರೆ. ಹಾಗೂ ಉಪಮುಖ್ಯಮಂತ್ರಿಯಾಗಿ ತನ್ವಿ 10ನೇ ತರಗತಿ ಆಯ್ಕೆಯಾಗಿದ್ದಾರೆ. ಈ ಚುನಾವಣೆ ಪ್ರಕ್ರಿಯೆಯು ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ ರವರ ಮಾರ್ಗದರ್ಶನದಲ್ಲಿ ನಡೆಯಿತು. ಮುಖ್ಯ ಚುನಾವಣಾ ಅಧಿಕಾರಿಯಾಗಿ ಶಿಕ್ಷಕ ಶಶಿಕಾಂತ್ ಹಾಗೂ ತಾಂತ್ರಿಕ ಸಹಾಯಕರಾಗಿ ಶಿಕ್ಷಕ ಯೋಗನಾಥ್ ಸಹಕರಿಸಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!