

ಪೊಲೀಸರು ಸಮಾಜದ ಸ್ವಾಸ್ಥ್ಯ ಕಾಪಾಡುವ ದೊಡ್ಡ ಹೊಣೆಗಾರಿಕೆ ಹೊಂದಿರುವವರು, ಅವರ ಬಗ್ಗೆ ಭಯ ಬೇಡ ಅವರನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಬೆಳ್ಳಾರೆ ಠಾಣೆಯ ಉಪ ನಿರೀಕ್ಷಕರಾದ ಶ್ರೀ ಸಂತೋಷ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಇಂದು (ಜೂ.13) ನಡೆದ ತೆರೆದ ಮನೆ ಕಾರ್ಯಕ್ರಮದಲ್ಲಿ JJ Act , wepons, ಬಂದೀಖಾನೆ, ಸಂಚಾರಿ ನಿಯಮ, ಫೋಕ್ಸ್ ಮತ್ತು ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಿದರು. ಎಣ್ಮೂರು ಬೀಟ್ ಪೊಲೀಸ್ ಶ್ರೀ ಹಾಲೇಶ್ ರವರು ವಿದ್ಯಾರ್ಥಿಗಳು ಓದುವ ಹವ್ಯಾಸ ರೂಢಿಸಿಕೊಳ್ಳಿ, ಉತ್ತಮ ವಿದ್ಯಾಭ್ಯಾಸ ಪಡೆದು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಮೂಲಕ ಸಮಾಜದಲ್ಲಿ ಶೋಷಣೆಗೆ ಒಳಗಾದವರಿಗೆ ನ್ಯಾಯ ಕೊಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಈ ಕಾರ್ಯಕ್ರಮದಲ್ಲಿ 52 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಕೌಟ್ ಮಾಸ್ಟರ್ ಶ್ರೀ ಲಿಂಗಪ್ಪ ಬೆಳ್ಳಾರೆ ಮತ್ತು ಗೈಡ್ ಕ್ಯಾಪ್ಟನ್ ಶ್ರೀಮತಿ ದಿವ್ಯಾ ಎಂ ಕೆ ಕಾರ್ಯಕ್ರಮದಲ್ಲಿ ಸಹಕರಿಸಿದರು.